ಪೊಲೀಸರಿಗೆ ಸಿಎಂ ಬೊಮ್ಮಾಯಿ ಹಿಗ್ಗಾಮುಗ್ಗಾ ಕ್ಲಾಸ್

Social Share

ಬೆಂಗಳೂರು,ಜು.30- ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳನ್ನು ಬಂಸುವಲ್ಲಿ ವಿಫಲವಾಗಿರುವ ಪೊಲೀಸರ ಕಾರ್ಯ ವೈಖರಿ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಡ ಕಾರಿದ್ದಾರೆ.

ಪ್ರಕರಣ ನಡೆದು 4 ದಿನವಾಗಿದೆ. ಇಡೀ ರಾಜ್ಯಾದ್ಯಂತ ಇದರ ಆಕ್ರೋಶ ಜ್ವಾಲಾಮುಖಿಯಂತೆ ಸೋಟಗೊಳ್ಳುತ್ತಿದೆ. ಆರೋಪಿಗಳನ್ನು ಏಕೆ ಬಂಸುತ್ತಿಲ್ಲ ಎಂದು ಬೊಮ್ಮಾಯಿ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ಸೂದ್ ಹಾಗೂ ಗುಪ್ತಚರ ವಿಭಾಗದ ಎಡಿಜಿಪಿ ಬಿ.ದಯಾನಂದ್ ಅವರನ್ನು ತರಾಟೆಗೆ ತೆಗೆದುಕೊಂಡರು. ಕಾನೂನು ಸುವ್ಯವಸ್ಥೆ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಪೊಲೀಸ್ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಬಂಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಘಟನೆಯಿಂದಾಗಿ ಇಡೀ ಸರ್ಕಾರ ತಲೆತಗ್ಗಿಸುವಂತಾಗಿದೆ.

ಎಲ್ಲೆಡೆ ನನ್ನನ್ನು ಸೇರಿದಂತೆ ಗೃಹಸಚಿವರು, ಮತ್ತಿತರರಿಗೆ ಸಂಘಟನೆಗಳ ಮುಖಂಡರು ಮುತ್ತಿಗೆ ಹಾಕುತ್ತಿದ್ದಾರೆ. ನಾಲ್ಕು ದಿನವಾದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದರೆ ನಾನು ಜನತೆಗೆ ಏನು ಉತ್ತರ ಕೊಡಲಿ ಎಂದು ಪ್ರಶ್ನಿಸಿದ್ದಾರೆಂದು ಗೊತ್ತಾಗಿದೆ.

ನಿಮ್ಮ ಕಾರ್ಯ ವೈಖರಿ ನನಗೆ ತೃಪ್ತಿ ತಂದಿಲ್ಲ. ಇದರಲ್ಲಿ ಇಲಾಖೆಯ ನಿರ್ಲಕ್ಷ್ಯತನ ಕಂಡುಬಂದಿದೆ. ಗುಪ್ತಚರ ವಿಭಾಗದ ವೈಫಲ್ಯವು ಎದ್ದು ಕಾಣುತ್ತಿದೆ. ಇಲಾಖೆಗೆ ಎಲ್ಲ ಸವಲತ್ತು ಕೊಟ್ಟರೂ ಪದೇ ಪದೇ ಇಂತಹ ಘಟನೆಗಳು ಏಕೆ ನಡೆದಿವೆ ಎಂದು ಪ್ರಶ್ನಿಸಿದರು.

ಹೇಳಿ ಕೇಳಿ ಕರಾವಳಿ ಸೂಕ್ಷ್ಮ ಪ್ರದೇಶ. ಮಸೂದ್ ಎಂಬ ಯುವಕ ಕೊಲೆಯಾದಾಗಲೇ ನಿಮ್ಮ ಇಲಾಖೆಯವರು ಎಚ್ಚೆತ್ತುಕೊಳ್ಳಬೇಕಾಗಿತ್ತು. 10 ದಿನದಲ್ಲಿ ಮೂರು ಕೊಲೆಗಳು ಒಂದೇ ಜಿಲ್ಲೆಯಲ್ಲಿ ನಡೆದಿದೆ ಎಂದರೆ ಇದಕ್ಕೆ ಹೊಣೆ ಯಾರು ಎಂದು ಅಧಿಕಾರಿಗಳಿಗೆ ಬೊಮ್ಮಾಯಿ ಚಾಟಿ ಬೀಸಿದ್ದಾರೆ.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಪ್ರವೀಣ್ ಸೂದ್ ಮತ್ತು ದಯಾನಂದ್ ಅವರು, ಈಗಾಗಲೇ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರು ನೀಡಿರುವ ಮಾಹಿತಿ ಮೇರೆಗೆ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡುತ್ತೇವೆ ಎಂದು ಹೇಳಿದರು.

ಇದಕ್ಕೆ ಇನ್ನಷ್ಟು ಸಿಡಿಮಿಡಿಗೊಂಡ ಬೊಮ್ಮಾಯಿ ಅವರು, ಬಂಸುತ್ತೇವೆ, ವಿಚಾರಣೆ ತನಿಖಾ ಹಂತದಲ್ಲಿದೆ, ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತೇವೆ ಇತ್ಯಾದಿ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ಮೊದಲು ಆರೋಪಿಗಳನ್ನು ಬಂಧಿಸಿ. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.

ಬಿಗಿ ಭದ್ರತೆ ಕೈಗೊಳ್ಳಿ:

ಇದೇ ಸಂದರ್ಭದಲ್ಲಿ ಬೊಮ್ಮಾಯಿ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ದಾಂಧಲೆ ಎಬ್ಬಿಸಿದ್ದು ಪ್ರತಿಭಟನೆ ಕಾವು ರಾಜ್ಯಾದ್ಯಂತ ಹಬ್ಬಬಹುದೆಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಬಿಜೆಪಿ ಪ್ರಾಬಲ್ಯವಿರುವ ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ತೆಗೆದುಕೊಳ್ಳಬೇಕೆಂದು ಪ್ರವೀಣ್ ಸೂದ್ಗೆ ನಿರ್ದೇಶನ ನೀಡಿದ್ದಾರೆ.

ಅಗತ್ಯಬಿದ್ದರೆ ಕೇಂದ್ರದಿಂದ ಪ್ಯಾರಾ ಮಿಲಿಟರಿಯನ್ನು ಬಳಸಿಕೊಳ್ಳಬಹುದು. ನಾನು ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಬಳಿಯೂ ಮಾತುಕತೆ ನಡೆಸುತ್ತೇನೆ. ಯಾವುದೇ ಕಾರಣಕ್ಕೂ ಪರಿಸ್ಥಿತಿ ಕೈ ಮೀರದಂತೆ ಕಟ್ಟೆಚ್ಚರ ವಹಿಸಬೇಕು. ಒಂದು ವೇಳೆ ಭದ್ರತಾ ಲೋಪ ಕಂಡುಬಂದರೆ ಪೊಲೀಸರ ಮೇಲೆ ಶಿಸ್ತು ಕ್ರಮ ಜರುಗಿಸಲು ಹಿಂದುಮುಂದೆ ನೋಡುವುದಿಲ್ಲ ಎಂದು ಸಿಎಂ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ಕುಮಾರ್ ಸೇರಿದಂತೆ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದಾರೆ. ಗುಪ್ತಚರ ವಿಭಾಗವನ್ನು ಬಲಪಡಿಸಲಾಗಿದೆ.
ವಿಶೇಷವಾಗಿ ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಕೇರಳ ಗಡಿಭಾಗದಲ್ಲಿರುವ ಮಂಗಳೂರು,ಕಾಸರಗೋಡು, ಸೇರಿದಂತೆ ಮತ್ತಿತರ ಕಡೆ ಚೆಕ್ ಪೋಸ್ಟ್ ಗಳನ್ನು ಹೆಚ್ಚಳ ಮಾಡಲಾಗಿದೆ.

ಹೊರ ರಾಜ್ಯಗಳಿಂದ ಬರುತ್ತಿರುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಶಂಕಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಅಲ್ಲದೆ ಕೆಲವು ಸಂಘಟನೆಗಳ ಮುಖಂಡರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಕಾನೂನು ಸುವ್ಯವಸ್ಥೆಯಲ್ಲಿ ಭದ್ರತಾ ಲೋಪವಾಗದಂತೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಪ್ರವೀಣ್ಸೂದ್ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

Articles You Might Like

Share This Article