ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿಎಂ ಬೊಮ್ಮಾಯಿ, ಶುಭ ಕೋರಿದ ಗಣ್ಯರು

Social Share

ಬೆಂಗಳೂರು,ಜ.28-ಮುಖ್ಯಮಂತ್ರಿಯಾಗಿ ಯಶಸ್ವಿ ಆರು ತಿಂಗಳು ಪೂರೈಸಿರುವುದರ ಜೊತೆಗೆ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅನೇಕ ಗಣ್ಯರು ಶುಭ ಕೋರಿದ್ದಾರೆ.  ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೂರವಾಣಿ ಕರೆ ಮಾಡಿ ಹುಟ್ಟುಹಬ್ಬದ ಶುಭ ಕೋರಿ ಉಳಿದಿರುವ ಅವಧಿಯಲ್ಲಿ ಜನತೆಯ ಆಶೋತ್ತರಗಳಿಗಾಗಿ ಆಡಳಿತ ನಡೆಸಬೇಕು ಎಂದು ಸಲಹೆ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಸಿಎಂ ಹುಬ್ಬಕ್ಕೆ ಶುಭ ಹಾರೈಸಿದ್ದಾರೆ. ಟ್ವೀಟ್ ಮಾಡಿರುವ ಅವರು ಸಿಎಂ ಬೊಮ್ಮಾಯಿ ಅವರಿಗೆ ಜನ್ಮದಿನದ ಆರ್ಥಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲೆಂದು ಹಾರೈಸುವುದಾಗಿ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಕೂಡ ಟ್ವೀಟ್ ಮಾಡಿ ಜನಾನುರಾಗಿ, ಜನಸೇವಕರು ಹಾಗೂ ನಮ್ಮೆಲ್ಲರ ಮಾರ್ಗದರ್ಶಕರಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮ ದಿನದ ಆರ್ಥಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಸಚಿವರಾದ ಅರಗ ಜ್ಞಾನೇಂದ್ರ, ಭೈರತಿ ಬಸವರಾಜ್, ಮುನಿರತ್ನ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಶಾಸಕರು, ಪಕ್ಷದ ಮುಖಂಡರು ಶುಭ ಕೋರಿದ್ದಾರೆ.
ಇದಕ್ಕೂ ಮುನ್ನ ಆರ್‍ಟಿನಗರದಲ್ಲಿರುವ ತಮ್ಮ ನಿವಾಸದಲ್ಲೇ ಕುಟುಂಬ ಸಮೇತ ಗೋ ಪೂಜೆ ನೆರವೇರಿಸಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು. ಬಳಿಕ ಬಾಲಬೃ ಅಥಿತಿ ಗೃಹದ ಪಕ್ಕದಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದರು.
ನಂತರ ಕಾವೇರಿ ನಿವಾಸಕ್ಕೆ ಆಗಮಿಸಿ ತಮ್ಮ ರಾಜಕೀಯ ಮಾರ್ಗದರ್ಶಕರೂ ಆಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಯಾವುದೇ ಜೈಕಾರ, ಅದ್ಧೂರಿ, ಆಡಂಬರಗಳಿಲ್ಲದೆ ಮುಖ್ಯಮಂತ್ರಿಗಳು ತಮ್ಮ ಹುಟ್ಟುಹಬ್ಬನ್ನು ಸರಳವಾಗಿ ಆಚರಿಸಿಕೊಂಡರು.

Articles You Might Like

Share This Article