ಸಿಎಂ ಬೊಮ್ಮಾಯಿ ಕನ್ನಡ ರಾಜ್ಯೋತ್ಸವ ಸಂದೇಶ

Social Share

ಬೆಂಗಳೂರು, ನ.1- 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಡಿನ ಸಮಸ್ತ ಜನತೆಗೆ ಶುಭಾಷಯಗಳನ್ನು ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಾಡಿನ ಏಕತೆ,ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.

ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ ಎಂದು ಬೊಮ್ಮಾಯಿ ಆಶಿಸಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-11-2022)

Articles You Might Like

Share This Article