ಪೊಲೀಸ್ ಅಧಿಕಾರಿಗಳ ಪೋಸ್ಟಿಂಗ್ ಕುರಿತು ತನಿಖೆ ನಂತರ ಸತ್ಯಾಂಶ ಹೊರಬರಲಿದೆ : ಸಿಎಂ

Social Share

ಬೆಂಗಳೂರು,ಅ.31- ಅಧಿಕಾರಿಗಳ ಪೋಸ್ಟಿಂಗ್ ಕುರಿತಂತೆ ಸಚಿವ ಎಂ.ಟಿ.ಬಿ.ನಾಗರಾಜ್ ಆರೋಪ ಕುರಿತು ತನಿಖೆಗೆ ಆದೇಶಿಸಲಿದ್ದು, ಸತ್ಯಾಂಶ ಹೊರಬರಲಿದೆ. ಈ ಬಗ್ಗೆ ಮಾತನಾಡಲು ಕಾಂಗ್ರೆಸ್‍ಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಟಿ.ಬಿ.ನಾಗರಾಜ್ ಆರೋಪ ಕುರಿತು ಸ್ವತಃ ನಾನೇ ತನಿಖೆ ನಡೆಸಿ ವರದಿ ನೀಡಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಹೇಳಿದರು.

ಉನ್ನತ ಮಟ್ಟದಲ್ಲಿ ತನಿಖೆಗೆ ಸೂಚಿಸಲಾಗಿದೆ. ಶೀಘ್ರವೇ ತನಿಖೆಯಿಂದ ಸತ್ಯಾಂಶ ಹೊರಬರಲಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್‍ಗೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ಕೆಲವು ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ವಹಿಸಿದಾಗ ಏನೆಲ್ಲ ಆಗಿದೆ ಎಂಬುದು ಎಲ್ಲರಿಗೂ ಗೊತ್ತು. ಅರ್ಕಾವತಿ ಲೇಔಟ್‍ನಲ್ಲಿ ನೂರಾರು ಎಕರೆ ಡಿನೋಟಿಫಿಕೇಷನ್ ನಡೆಸಿದ ರೀಡೊ ತನಿಖೆ ಏನಾಯಿತು ಎಂಬುದು ರಾಜ್ಯದ ಜನತೆಗೆ ಗೊತ್ತು ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು.

ಪ್ರೀತಿಸಿದವನನ್ನು ಮನೆಗೆ ಕರೆಸಿ ವಿಷವಿಟ್ಟು ಕೊಂದ ಪ್ರೇಯಸಿ..!

ಪ್ರಕರಣ ಕುರಿತು ಬೇಗ ಸತ್ಯಾಂಶ ಹೊರಬರಲಿ ಎಂಬ ಕಾರಣಕ್ಕಾಗಿಯೇ ನಾವು ಉನ್ನತಮಟ್ಟದ ತನಿಖೆಗೆ ಆದೇಶಿಸಿದ್ದೇವೆ. ಸತ್ಯಾಂಶ ಹೊರಬರಲಿ ಅಲ್ಲಿಯವರೆಗೂ ಕಾಂಗ್ರೆಸ್‍ನವರು ಯಾರಿಗೂ ಪ್ರಮಾಣ ಪತ್ರ ಕೊಡುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.

ನಾಳೆ ನಡೆಯಲಿರುವ ಕನ್ನಡ ಚಿತ್ರರಂಗದ ಧ್ರುವತಾರೆ ಪುನೀತ್ ರಾಜ್‍ಕುಮಾರ್ ಅವರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸ್ವಾಭಿಮಾನಿ ಕನ್ನಡಿಗರೆಲ್ಲರೂ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ನಾಳೆ ಮಧ್ಯಾಹ್ನ 4 ಗಂಟೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ವಿಧಾನಸೌಧದ ಮೆಟ್ಟಿಲುಗಳು ಮೇಲೆ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡಲಾಗುತ್ತಿದೆ. ಎಲ್ಲಾ ಅಭಿಮಾನಿಗಳು ಭಾಗವಹಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದರು.

67ನೇ ಕನ್ನಡ ರಾಜ್ಯೋತ್ಸವವನ್ನು ನಾಳೆ ಆಚರಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ ಹಾಗೂ ನವೆಂಬರ್ 2ರಿಂದ 4ವರೆಗೆ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮವನ್ನೂ ಸಹ ಮಾಡುತ್ತಿದ್ದೇವೆ. ವಿಶ್ವದ ನಾನಾ ಭಾಗದ ಹೂಡಿಕೆದಾರರು, ಬಂಡವಾಳಶಾಹಿಗಳು ಇದರಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮ ಮುಂದಿನ ಕರ್ನಾಟಕದ ಆರ್ಥಿಕ ಬೆಳವಣಿಗೆಯ ದಿಕ್ಸೂಚಿಯಾಗಿರಲಿದೆ. 5 ಲಕ್ಷ ಕೋಟಿ ಹೂಡಿಕೆಯಾಗಲಿದೆ. ಅನೇಕ ಕ್ಷೇತ್ರಗಳ ಪ್ರಗತಿ, ಬೆಳವಣಿಗೆ ಸವಾಲುಗಳ ಬಗ್ಗೆ ಕೂಡ ಚರ್ಚೆ ನಡೆಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೂ ಎಲ್ಲರೂ ಭಾಗಿಯಾಗಬೇಕು ಎಂದರು.

ನವೆಂಬರ್ 11ರಂದು ವಂದೇ ಭಾರತ್ ರೈಲು , ವಿಮಾನ ನಿಲ್ದಾಣದ ಟರ್ಮಿನಲ್-2 ಮತ್ತು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಉದ್ಘಾಟನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡುತ್ತಿದ್ದಾರೆ. ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Articles You Might Like

Share This Article