ತಡರಾತ್ರಿ ಪತ್ರಿಕಾಗೋಷ್ಠಿ ನಡೆಸಿ ಜನೋತ್ಸವ ರದ್ದು ಮಾಡಿದ ಸಿಎಂ ಬೊಮ್ಮಾಯಿ

Social Share

ಬೆಂಗಳೂರು,ಜು.28- ತಡರಾತ್ರಿ ಪತ್ರಿಕಾಗೋಷ್ಠಿ ನಡೆಸಿ ಜನೋತ್ಸವ ಯಾತ್ರೆ ರದ್ದುಗೊಳಿಸಿರುವ ಸಿಎಂ ನಿರ್ಧಾರ ಈಗ ತೀವ್ರ ಅಚ್ಚರಿಗೆ ಕಾರಣವಾಗಿದ್ದು, ಹೈಕಮಾಂಡ್ ತುರ್ತು ಎಚ್ಚರಿಕೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಬಿಜೆಪಿ ಉನ್ನತ ಮೂಲಗಳ ಪ್ರಕಾರ ಬುಧವಾರ ರಾತ್ರಿಯವರೆಗೂ ಜನೋತ್ಸವ ಕಾರ್ಯಕ್ರಮ ರದ್ಧುಗೊಳಿಸುವ ಯಾವ ಉದ್ದೇಶವೂ ಸಿಎಂ ಬೊಮ್ಮಾಯಿ ಅವರಿಗೆ ಇರಲಿಲ್ಲ. ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಆರ್.ಟಿ. ನಗರದಲ್ಲಿ ನಡೆದ ಬಿಜೆಪಿ ನಾಯಕರಾದ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗವಹಿಸಿದ್ದ ಸಭೆಯಲ್ಲಿ ಸಾಧನಾ ಸಮಾವೇಶವನ್ನು ಶ್ರದ್ಧಾಂಜಲಿ ಸಭೆಯಾಗಿ ಪರಿವರ್ತಿಸುವ ಪ್ರಸ್ತಾಪವಾಗಿತ್ತಾದರೂ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದ ತಯಾರಿಯೂ ಮುಂದುವರಿದಿತ್ತು.
ಆದರೆ, ತಡರಾತ್ರಿ ವರಿಷ್ಢರಿಂದ ಸ್ಪಷ್ಟ ಸೂಚನೆ ಬಂದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾರ್ಯಕರ್ತರ ಹತ್ಯೆಯಾದಾಗ ಸಾಧನೆಯ ಸಂಭ್ರಮ ಬೇಡ ಎಂಬ ಸೂಚನೆ ಹಿನ್ನೆಲೆಯಲ್ಲಿ ತಡರಾತ್ರಿ 12.30ಕ್ಕೆ ತುರ್ತು ಪತ್ರಿಕಾಗೋಷ್ಠಿ ಕರೆದು ಸಿಎಂ ಬೊಮ್ಮಾಯಿ ನಿರ್ಧಾರ ಪ್ರಕಟಿಸಿದ್ದಾರೆ.

Articles You Might Like

Share This Article