ಬಿಜೆಪಿ ಶಾಸಕನ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ, ಸಿಎಂ ಪ್ರತಿಕ್ರಿಯೆ ಏನು..?

Social Share

ಬೆಂಗಳೂರು, ಮಾ.3- ಯಾರೇ ತಪ್ಪು ಮಾಡಿದ್ದರೂ ಕಾನೂನಿನ ಪ್ರಕಾರವೇ ಶಿಕ್ಷೆಯಾಗಲಿದೆ. ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ನಾವು ಯಾರನ್ನೂ ಕೂಡ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರುವುದೇ ಭ್ರಷ್ಟಾಚಾರ ತಡೆಯಲು.

ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್‍ಗಳು ಮುಚ್ಚಿಹೋಗಿದ್ದವು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ನಮ್ಮ ಸರ್ಕಾರ ಯಾರನ್ನೂ ರಕ್ಷಿಸಲು ಹೋಗುವುದಿಲ್ಲ ಎಂದರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರನ ಮನೆಯಲ್ಲಿ 6 ಕೋಟಿ ಹಣ ಪತ್ತೆ

ಶಾಸಕರ ಪುತ್ರನ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಎಸಿಬಿ ರಚಿಸಿ ಲೋಕಾಯುಕ್ತದ ಹಲ್ಲು ಕೀಳುವ ಪ್ರಯತ್ನ ನಾವು ಮಾಡಿಲ್ಲ, ಅದನ್ನು ಮಾಡಿರುವುದು ಕಾಂಗ್ರೆಸ್. ಲೋಕಾಯುಕ್ತಕ್ಕೆ ಸಂಪೂರ್ಣ ಮುಕ್ತ ಅಧಿಕಾರ ನೀಡುವ ಮರು ಆದೇಶ ನೀಡಿ ಲೋಕಾಯುಕ್ತವನ್ನು ಮರುಸ್ಥಾಪಿಸಿದ್ದೇ ಬಿಜೆಪಿ ಸರ್ಕಾರ.

ಲೋಕಾಯುಕ್ತ ಇರುವುದೇ ಇಂತಹ ಭ್ರಷ್ಟಾಚಾರ ನಿಗ್ರಹಕ್ಕೆ. ಅದು ಸರ್ವಸ್ವತಂತ್ರವಾಗಿದೆ. ಲೋಕಾಯುಕ್ತ ಮುಕ್ತವಾಗಿ ಸಮಗ್ರ ತನಿಖೆ ನಡೆಸಲಿ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಇದರಲ್ಲಿ ಸಮಗ್ರ ತನಿಖೆಯಾಗಲಿದೆ ಎಂದು ಹೇಳಿದ್ದಾರೆ.

ಮುಕ್ತವಾಗಿ ತನಿಖೆ ನಡೆದು ಹಣ ಯಾರಿಗೆ ಸೇರಿದೆ ಎನ್ನುವ ಮಾಹಿತಿ ಹೊರಗೆ ಬರಲಿ. ಸತ್ಯ ಜನರಿಗೆ ತಿಳಿದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಹಿಂದೆ ಕಾಂಗ್ರೆಸ್ ಸರ್ಕಾರದ ಅಕಾರವಯಲ್ಲಿ ಇಂತಹ ಹತ್ತಾರು ಪ್ರಕರಣಗಳು ನಡೆದಿವೆ ಮತ್ತು ಅಲ್ಲಲ್ಲೇ ಮುಚ್ಚಿಹೋಗಿವೆ.

ಇಂದು ಬಿಜೆಪಿ ವಿರುದ್ಧ ಇನ್ನಿಲ್ಲದ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಅಂದು ಎಸಿಬಿ ರಚಿಸಿ ಇಂತಹ ಪ್ರಕರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇ ಕಾಂಗ್ರೆಸ್‍ನವರು. ಹೀಗಾಗಿ ಇಂದು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗೆಲ್ಲಿದೆ ಎಂದು ಕೇಳಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ, ಅವರ ಕಾಲದ ಹಗರಣಗಳನ್ನು ತನಿಖೆ ಮಾಡಲಿ. ಲೋಕಾಯುಕ್ತ ಇರುವುದೇ ಭ್ರಷ್ಟಾಚಾರ ನಿಯಂತ್ರಣ ಮಾಡೋಕೆ. ಯಾವ್ಯಾವ ಹಗರಣ ಇದೆ ಎಲ್ಲಾ ತನಿಖೆಯಾಗುತ್ತದೆ. ನಾವು ಯಾರನ್ನೂ ರಕ್ಷಣೆ ಮಾಡಲ್ಲ ಎಂದರು.

ಯಾರೇ ತಪ್ಪು ಮಾಡಿದ್ದರೂ ಕಾನೂನಿನ ಪ್ರಕಾರವೇ ಶಿಕ್ಷೆಯಾಗಲಿದೆ. ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ನಾವು ಯಾರನ್ನೂ ಕೂಡ ರಕ್ಷಣೆ ಮಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರುವುದೇ ಭ್ರಷ್ಟಾಚಾರ ತಡೆಯಲು. ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್‍ಗಳು ಮುಚ್ಚಿಹೋಗಿದ್ದವು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ನಮ್ಮ ಸರ್ಕಾರ ಯಾರನ್ನೂ ರಕ್ಷಿಸಲು ಹೋಗುವುದಿಲ್ಲ ಎಂದರು.

ಶಾಸಕರ ಪುತ್ರನ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಎಸಿಬಿ ರಚಿಸಿ ಲೋಕಾಯುಕ್ತದ ಹಲ್ಲು ಕೀಳುವ ಪ್ರಯತ್ನ ನಾವು ಮಾಡಿಲ್ಲ, ಅದನ್ನು ಮಾಡಿರುವುದು ಕಾಂಗ್ರೆಸ್.

ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಸಹವಾಸ ಸಾಕು ; ದೀದಿ

ಲೋಕಾಯುಕ್ತಕ್ಕೆ ಸಂಪೂರ್ಣ ಮುಕ್ತ ಅಧಿಕಾರ ನೀಡುವ ಮರು ಆದೇಶ ನೀಡಿ ಲೋಕಾಯುಕ್ತವನ್ನು ಮರುಸ್ಥಾಪಿಸಿದ್ದೇ ಬಿಜೆಪಿ ಸರ್ಕಾರ. ಲೋಕಾಯುಕ್ತ ಇರುವುದೇ ಇಂತಹ ಭ್ರಷ್ಟಾಚಾರ ನಿಗ್ರಹಕ್ಕೆ. ಅದು ಸರ್ವಸ್ವತಂತ್ರವಾಗಿದೆ. ಲೋಕಾಯುಕ್ತ ಮುಕ್ತವಾಗಿ ಸಮಗ್ರ ತನಿಖೆ ನಡೆಸಲಿ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಇದರಲ್ಲಿ ಸಮಗ್ರ ತನಿಖೆಯಾಗಲಿದೆ ಎಂದು ಹೇಳಿದ್ದಾರೆ.

ಮುಕ್ತವಾಗಿ ತನಿಖೆ ನಡೆದು ಹಣ ಯಾರಿಗೆ ಸೇರಿದೆ ಎನ್ನುವ ಮಾಹಿತಿ ಹೊರಗೆ ಬರಲಿ. ಸತ್ಯ ಜನರಿಗೆ ತಿಳಿದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಹಿಂದೆ ಕಾಂಗ್ರೆಸ್ ಸರ್ಕಾರದ ಅಧಿಕಾರವಯಲ್ಲಿ ಇಂತಹ ಹತ್ತಾರು ಪ್ರಕರಣಗಳು ನಡೆದಿವೆ ಮತ್ತು ಅಲ್ಲಲ್ಲೇ ಮುಚ್ಚಿಹೋಗಿವೆ.

ಇಂದು ಬಿಜೆಪಿ ವಿರುದ್ಧ ಇನ್ನಿಲ್ಲದ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಅಂದು ಎಸಿಬಿ ರಚಿಸಿ ಇಂತಹ ಪ್ರಕರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇ ಕಾಂಗ್ರೆಸ್‍ನವರು. ಹೀಗಾಗಿ ಇಂದು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗೆಲ್ಲಿದೆ ಎಂದು ಕೇಳಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ, ಅವರ ಕಾಲದ ಹಗರಣಗಳನ್ನು ತನಿಖೆ ಮಾಡಲಿ. ಲೋಕಾಯುಕ್ತ ಇರುವುದೇ ಭ್ರಷ್ಟಾಚಾರ ನಿಯಂತ್ರಣ ಮಾಡೋಕೆ. ಯಾವ್ಯಾವ ಹಗರಣ ಇದೆ ಎಲ್ಲಾ ತನಿಖೆಯಾಗುತ್ತದೆ. ನಾವು ಯಾರನ್ನೂ ರಕ್ಷಣೆ ಮಾಡಲ್ಲ ಎಂದರು.

CM Bommai, BJP, MLA, Madal Virupakshappa, son, Lokayukta,

Articles You Might Like

Share This Article