ಕೋವಿಡ್ ಗಾಬರಿಬೇಡ, ಎಚ್ಚರಿಕೆ ಇರಲಿ : ಸಿಎಂ ಬೊಮ್ಮಾಯಿ

Social Share

ಹುಬ್ಬಳ್ಳಿ, ಡಿ.24- ಕೋವಿಡ್ ಸಾಂಕ್ರಾಮಿಕದ ಬಗ್ಗೆ ಗಾಬರಿಯಾಗಬೇಕಿಲ್ಲ. ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೂಸ್ಟರ್ ಡೋಸ್ ನೀಡುವುದು ಸೇರಿದಂತೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ಬೂಸ್ಟರ್ ಡೋಸ್‍ಗಳನ್ನು ಕೊಡಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಪ್ರತಿಯೊಂದು ಐಎಲ್ ಐ, ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ಕೈಗೊಳ್ಳುವುದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮುಂತಾದ ಕ್ರಮ ಕೈಗೊಳ್ಳುವ ಸೂಚನೆ ನೀಡಲಾಗುವುದು ಎಂದು ಹೇಳಿದರು.

ಆರೋಗ್ಯ ಮೂಲಸೌಕರ್ಯಗಳಾದ ಔಷಧಿ, ಲಸಿಕೆ ಇವೆಲ್ಲವನ್ನೂ ದಾಸ್ತಾನು ಮಾಡಿಕೊಳ್ಳಲು ಕ್ರಮ ವಹಿಸಬೇಕು. ಯಾವುದೇ ಸಂದರ್ಭದಲ್ಲಿ ಯಾವುದೇ ಕೊರತೆಯಾಗಬಾರದು. ಆಮ್ಲಜನಕ ಘಟಕಗಳನ್ನು ಡ್ರೈ ರನ್ ಮಾಡಿ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ.

ಚಿಲುಮೆ ಅಕ್ರಮ ಪ್ರಕರಣ : ಇಬ್ಬರು IAS ಅಧಿಕಾರಿಗಳ ಅಮಾನತು ವಾಪಸ್

ವಿಮಾನ ನಿಲ್ದಾಣದಲ್ಲೂ ನಿರಂತರವಾಗಿ ನಿಗಾ ವಹಿಸಿ, ನಿರ್ಬಂಧಗಳನ್ನು ಹೇರಲಾಗಿದೆ. ವ್ಯಕ್ತಿ, ಸಂಘ, ಸರ್ಕಾರ, ಸಮಾಜ ಎಲ್ಲರೂ ಸೇರಿ ಇದನ್ನು ಎದುರಿಸಬೇಕಿದೆ. ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು ಹೊರಡಿ ಸಲಾಗುವುದು ಎಂದರು.

ಸದನದಲ್ಲಿ ಎರಡು ಅಥವಾ ಮೂರು ದಿನ ಉತ್ತರ ಕರ್ನಾಟಕದ ವಿಷಯಗಳ ಬಗ್ಗೆ ಅವಕಾಶ ಮಾಡಿಕೊಡಲು ಸಭಾಧ್ಯಕ್ಷರಿಗೆ ಕೋರಲಾಗಿದೆ. ಸದನದಲ್ಲಿ ಎರಡೂ ಕಡೆ ಈ ವಿಷಯ ಕೈಗೊಳ್ಳಲು ಉತ್ಸುಕರಾಗಿದ್ದಾರೆ ಎಂದರು.

CM Bommai, booster dose, coronavirus,

Articles You Might Like

Share This Article