ಬೆಂಗಳೂರು,ಫೆ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಟ್ಟಾಗಿ ಇಂದು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುತ್ತಿರುವುದು ಭಾರೀ ಕುತೂಹಲ ಕೆರಳಿಸಿದೆ.
ದೆಹಲಿ ಪ್ರವಾಸ ಕೈಗೊಂಡಿರು ಉಭಯ ನಾಯಕರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಹಲವು ಮಹತ್ವದ ವಿಷಯಗಳ ಕುರಿತು ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ. ಇಂದು ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ದೆಹಲಿಗೆ ತೆರಳಲಿದ್ದು, ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಿ ಕೇಂದ್ರ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ನೀಡಿರುವ ಅನುದಾನ ಮತ್ತು ಕರ್ನಾಟಕಕ್ಕೆ ವಿವಿಧ ಯೋಜನೆಗಳಿಗೆ ಕೇಂದ್ರ ನೀಡಿರುವ ಅನುದಾನಕ್ಕಾಗಿ ಮುಖ್ಯಮಂತ್ರಿಗಳು ಧನ್ಯವಾದ ತಿಳಿಸಲಿದ್ದಾರೆ.
ನಾಳೆ ತ್ರಿಪುರದಲ್ಲಿ ಅಮಿತ್ ಶಾ ಚುನಾವಣಾ ರ‍್ಯಾಲಿ
ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಕೇಂದ್ರ ಮತ್ತು ರಾಜ್ಯದ ನಡುವಿನ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿಯವರ ಸಿ.ಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆಸಲಿದ್ದಾರೆ. ಬಳಿಕ ರಾತ್ರಿ 11.15ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮನೆಯಲ್ಲಿ ನಡೆಯಲಿರುವ ಶುಭ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದು, ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿ ಕೆಲವು ಹಿರಿಯ ನಾಯಕರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸುವ ಸಾಧ್ಯತೆಗಳಿವೆ.
ಅಲ್ಲದೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ವಿಶೇಷ ಅನುದಾನ, ರೈಲ್ವೆ ಸವಲತ್ತುಗಳ ಸುಧಾರಣೆಗೆ ರಾಜ್ಯಕ್ಕೆ ಹೆಚ್ಚಿನ ನೆರವು ನೀಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸಲಿದ್ದಾರೆ.
ಮೊದಲು ಧೋನಿಗಾಗಿ ನಂತರ ದೇಶಕ್ಕಾಗಿ ಕ್ರಿಕೆಟ್ ಆಡಿದ್ದೇನೆ : ರೈನಾ
ಪ್ರಧಾನಿ ನರೇಂದ್ರ ಮೋದಿಯವರು ನಾಳೆ ರಾಜ್ಯಕ್ಕೆ ಆಗಮಿಸಿ, ಮೂರು ಅಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿ ಇಬ್ಬರೂ ಇಂದು ರಾತ್ರಿಯೇ ಬೆಂಗಳೂರಿಗೆ ಮರಳಲಿದ್ದಾರೆ.
CM Bommai, BS Yediyurappa, Delhi,