ಬೆಳಗಾವಿ,ಡಿ.26- ಚೀನಾ ಸೇರಿದಂತೆ ವಿಶ್ವದ ನಾನಾ ಭಾಗಗಳಲ್ಲಿ ಬಿಎಫ್-ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದರೂ ಸದ್ಯಕ್ಕೆ ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಒಂದಿಷ್ಟು ಮಾರ್ಗಸೂಚಿಗಳನ್ನು ಜಾರಿಗೆ ತರಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಇಲ್ಲಿನ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.
ಸದ್ಯಕ್ಕೆ ಲಾಕ್ಡೌನ್ ಜಾರಿ ಮಾಡುವುದಾಗಲಿ, ಸಾರ್ವಜನಿಕರು, ಮಧ್ಯಮವರ್ಗದವರು, ಶ್ರಮಿಕರು ಮತ್ತಿತರರಿಗೆ ಆರ್ಥಿಕ ಚಟುವಟಿಕೆಗಳಿಗೆ ಕಡಿವಾಣ ಹಾಕದೆ ಕೋವಿಡ್ ನಿಯಮಗಳನ್ನು ಜಾರಿ ಮಾಡಲು ಸಭೆ ನಿರ್ಧರಿಸಿದೆ ಎಂದು ಗೊತ್ತಾಗಿದೆ.
ಟಾಸ್ಕ್ಫೋರ್ಸ್ ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡುವ ಶಿಫಾರಸ್ಸುಗಳ ಮೇಲೆ ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡಬೇಕು. ಆದರೆ ಯಾವುದೇ ಕಾರಣಕ್ಕೂ ಜನಸಾಮಾನ್ಯರ ಆರ್ಥಿಕ ಚಟುವಟಿಕೆಗಳಿಗೆ ಹೊರೆಯಾಗದಂತೆ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸೂಚನೆ ಕೊಟ್ಟಿದ್ದಾರೆ.
ರೆಡ್ಡಿ ಪಕ್ಷ ಬಿಜೆಪಿಗೆ ಸಂಕಷ್ಟವೇ..? ಕಾಂಗ್ರೆಸ್, ಜೆಡಿಎಸ್ ವೇಗಕ್ಕೆ ಕಡಿವಾಣವೇ.?
ಒಂದು ಮತ್ತು 2ನೇ ಹಂತದ ಲಸಿಕಾ ಯಾನ ಅತ್ಯಂತ ಯಶಸ್ವಿಯಾಗಿದೆ. ಶೇ.100ಕ್ಕೆ ನೂರರಷ್ಟು ನಾವು ನಿರೀಕ್ಷಿತ ಗುರಿಯನ್ನು ತಲುಪಿದ್ದೇವೆ. ಆದರೆ 3ನೇ ಹಂತದಲ್ಲಿ ಬೂಸ್ಟರ್ ಡೋಸ್ ನಮ್ಮ ನಿರೀಕ್ಷೆಗೆ ತಕ್ಕಂತೆ ನಡೆದಿಲ್ಲ. ಅರ್ಹತೆ ಇರುವ ಪ್ರತಿಯೊಬ್ಬರಿಗೂ ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಅಭಿಯಾನವನ್ನು ನಡೆಸಬೇಕು. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತೆಯರು ಹಾಗೂ ಕೊರೊನಾ ವಾರಿಯರ್ಸ್ಗಳಿಗೂ ನೀಡಬೇಕು. ಆರೋಗ್ಯ ಇಲಾಖೆಯಿಂದ ಹೆಚ್ಚು ಅಭಿಯಾನ ನಡೆಸಬೇಕೆಂದು ಅಭಿಯಾನ ನಡೆಸಬೇಕು ಎಂದು ಸಿಎಂ ನಿರ್ದೇಶನ ನೀಡಿದ್ದಾರೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪ್ರತ್ಯೇಕವಾದ ಮಾರ್ಗಸೂಚಿಗಳನ್ನು ಜಾರಿಗೆ ಮಾಡಬೇಕು. ಸರ್ಕಾರದ ನಿಯಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಅಗತ್ಯ ಕ್ರಮಗಳನ್ನು ವಹಿಸಬೇಕು.
ಲಸಿಕೆಯನ್ನು ಪರಿಣಾಮಕಾರಿಯಾಗಿ ಬಳಸುವುದು, ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ನಿಯಮ ಪಾಲಿಸುವ ಮೂಲಕ ಆರ್ಥಿಕ ಚಟುವಟಿಕೆಗಳನ್ನು ನಡೆಸಬೇಕೆಂದು ಸೂಚಿಸಿದ್ದಾಗಿ ಮೂಲಗಳು ಖಚಿತಪಡಿಸಿವೆ.
ಪಾರದರ್ಶಕ ನೇಮಕ:
ಇನ್ನು ಸಚಿವ ಸಂಪುಟ ಸಭೆಯಲ್ಲಿ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳನ್ನು ನೇಮಕ ಮಾಡುವ ಯಾವುದೇ ರೀತಿಯ ಟೀಕೆಗಳು ಇಲ್ಲವೇ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನೇಮಿಸಬೇಕೆಂದು ತೀರ್ಮಾನಿಸಲಾಗಿದೆ. ವಿವಿಗಳ ಉಪಕುಲಪತಿಗಳ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಡಿರುವ ಆರೋಪದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಇನ್ನು ಮುಂದೆ ವಿವಿಗಳಿಗೆ ಉಪಕುಲಪತಿಗಳಿಗೆ ನೇಮಕಾತಿ ಮಾಡುವಾಗ ಪಾರದರ್ಶಕವಾಗಿ ನೇಮಿಸಬೇಕು. ಸಾಧ್ಯವಾದರೆ ಸಮಿತಿಯನ್ನು ನೇಮಿಸಿ ಅವರು ನೀಡುವ ಶಿಫಾರಸ್ಸಿನಂತೆ ನೇಮಕ ಮಾಡುವಂತೆ ಸೂಚಿಸಲಾಗಿದೆ.
ಇನ್ನು ಸಚಿವ ಸಂಪುಟ ಸಭೆಯಲ್ಲಿ ನಗರ ಯೋಜನೆ ಇಲ್ಲವೇ ಕಟ್ಟಿರುವ ಕಟ್ಟಡಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಅಧಿವೇಶನ ಆರಂಭವಾಗಿ ವಾರಕಳೆದರೂ ನಿಲ್ಲದ ಸಾಲು ಸಾಲು ಪ್ರತಿಭಟನೆಗಳು
ಯೋಜನಾ ಸಮಿತಿ ಹೊರಗೆ ಮತ್ತು ಒಳಗೆ ಇರುವ ಲೇಔಟ್ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿಯವರು ಈ ಕುರಿತು ಅಕಾರಿಗಳಿಗೆ ವಿಸ್ತೃತ ವರದಿ ನೀಡಬೇಕು. ಆ ವರದಿ ಬಂದ ನಂತರ ಸೂಕ್ತ ಕ್ರಮ ತೆಗೆದುಕೊಳ್ಳುವ ಆಶ್ವಾಸನೆ ನೀಡಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕ್ರಷರ್ ಮಾಲೀಕರ ಸಂಘ ನಡೆಸುತ್ತಿರುವ ಹೋರಾಟ ಹಾಗೂ ಅಗ್ನಿಶಾಮಕ ಸುರಕ್ಷತೆ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಐದು ವಿವಿ ಸ್ಥಾಪನೆಗೆ ಒಪ್ಪಿಗೆ:
ಸಚಿವ ಸಂಪುಟ ಸಭೆಯಲ್ಲಿ ಹೊಸದಾಗಿ 5 ವಿಶ್ವವಿದ್ಯಾನಿಲಯಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಟಿ ಜಾನ್ ವಿವಿ-ಬೆಂಗಳೂರು, ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾನಿಲಯ ಬೆಂಗಳೂರು, ಸಪ್ತಗಿರಿ ವಿಶ್ವವಿದ್ಯಾನಿಲಯ ಬೆಂಗಳೂರು, ಜಿಎಂ ವಿಶ್ವವಿದ್ಯಾನಿಲಯ ದಾವಣಗೆರೆ, ಆಚಾರ್ಯ ವಿಶ್ವವಿದ್ಯಾನಿಲಯ ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ಕಿಷ್ಕಿಂದ ವಿಶ್ವವಿದ್ಯಾನಿಲಯ ಆರಂಭಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ.
ಈ ವಿವಿಗಳನ್ನು ಸ್ಥಾಪಿಸಲು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
CM Bommai, cabinet, meeting, Corona, new guidelines,