ಬೆಂಗಳೂರು, ಆ.12- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್‍ಎಸ್‍ಎಸ್‍ನ ಕೈಗೊಂಬೆ. ಈವರೆಗೂ ಅಭಿವೃದ್ಧಿ ಮಾಡದವರು, ಮುಂದೆ ಕೆಲಸ ಮಾಡುತ್ತಾರಾ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಬೆಳ್ಳಿ ಕಾಲುಂಗರ ಚಿತ್ರದ ಮುಹೂರ್ತದಲ್ಲಿ ಭಾಗವಹಿಸಿದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ನಾನು ಹೇಳಿರಲಿಲ್ಲ ಎಂದು ಸ್ಪಷ್ಟ ಪಡಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇನೆ, ಜನರ ಸಮಸ್ಯೆಯತ್ತ ಗಮನ ಹರಿಸುತ್ತೇನೆ ಎಂದು ಮುಖ್ಯಮಂತ್ರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈವರೆಗೂ ಏನು ಮಾಡದವರು ಮುಂದೆ ಮಾಡುತ್ತಾರಾ ಎಂದು ಲೇವಡಿ ಮಾಡಿದರು.