ಕಾಂಗ್ರೆಸ್ ಅಧಿಕ್ಕಾರಕ್ಕೆ ಬರಲ್ಲ ಅಂತ ಗೊತ್ತಿದ್ದೇ ಸುಳ್ಳು ಭರವಸೆ ನೀಡುತ್ತಿದ್ದಾರೆ : ಸಿಎಂ

Social Share

ಹುಬ್ಬಳ್ಳಿ,ಜ.16- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದ್ದೇ ಕಾಂಗ್ರೆಸ್‍ನವರು ರಾಜ್ಯದ ಜನತೆಗೆ ಸುಳ್ಳು ಭರವಸೆಗಳನ್ನು ನೀಡಲು ಹೊರಟಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಅನುಷ್ಠಾನ ಮಾಡಲು ಸಾಧ್ಯವಿಲ್ಲದ
ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಅವರ ಯಾವ ಯೋಜನೆಗಳು ಕಾರ್ಯಗತಗೊಳುವುದಿಲ್ಲ. ಏಕೆಂದರೆ ಅವರು ಅಧಿಕಾರಕ್ಕೆ ಬಂದರೆ ತಾನೇ ಇದನ್ನು ಅನುಷ್ಠಾನಗೊಳಿಸ ಸಾಧ್ಯ ಎಂದು ವ್ಯಂಗ್ಯವಾಡಿದರು.

ಏನೇ ಭರವಸೆ ನೀಡಿದರೂ ವಾಸ್ತವದಲ್ಲಿ ಅದು ಕಾರ್ಯರೂಪಕ್ಕೆ ಬರುವಂತಿರಬೇಕು. ಸುಳ್ಳು ಭರವಸೆಗಳನ್ನು ಕೊಡುವುದು ತುಂಬ ಸುಲಭ. ಯಾರು ಅಧಿಕಾರಕ್ಕೆ ಬರುವುದಿಲ್ಲ ಎಂದು ಗೊತ್ತಿರುತ್ತದೆಯೋ ಅಂಥವರು ಮಾತ್ರ ಸುಳ್ಳಿನ ಭರವಸೆಗಳನ್ನು ಕೊಡುತ್ತಾರೆ ಎಂದು ಟೀಕಿಸಿದರು.

ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುವ ಕುರಿತು ಅವರು ಏನೇನೊ ಭರವಸೆ ಕೊಡುತ್ತಾರೆ. ಖಂಡಿತವಾಗಿಯೂ ಅವರು ಅಧಿಕಾರಕ್ಕೆ ಬರುವುದಿಲ್ಲ. ರಾಜ್ಯದ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ರಾಜ್ಯಕ್ಕೆ ಆಗಮಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಅವರು ಬರಲಿ ನಮ್ಮದೇನು ಅಭ್ಯಂತರವಿಲ್ಲ. ಆದರೆ ಕಾರ್ಯಕ್ರಮಕ್ಕೆ ಇಟ್ಟಿರುವ ಹೆಸರು ನೋಡಿದರೆ ಕರ್ನಾಟಕದಲ್ಲಿ ಆ ಪಕ್ಷಕ್ಕೆ ಯಾರೊಬ್ಬರು ನಾಯಕಿಯರೇ ಇಲ್ಲ ಎಂದು ಕುಹುಕವಾಡಿದರು.

ಪ್ರೀಯಾಂಕ ಗಾಂಧಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ‘ಕೈ’ನಾಯಕರು

ನಾ ನಾಯಕಿ ಎಂದರೆ ನಾನು ನಾಯಕಿ ಎಂದರ್ಥ. ಹಾಗಾದರೆ ಕಾಂಗ್ರೆಸ್‍ನಲ್ಲಿ ಯಾರು ನಾಯಕಿಯರು ಇಲ್ಲವೇ. ಹೋಗಲಿ ಪ್ರಿಯಾಂಕ ವಾದ್ರಾ ಪ್ರಚಾರ ನಡೆಸಿದ ಕಡೆ ಎಷ್ಟು ಗೆದ್ದಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಬರಲಿರುವ ಬಜೆಟ್‍ನಲ್ಲಿ ಯುವಕರಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಲು ತೀರ್ಮಾನಿಸಲಾಗಿದೆ. ಇದೇ ಮೊದಲ ಬಾರಿಗೆ ಗ್ರಾಮೀಣ ಭಾಗಗಳಲ್ಲಿ ಕುಸ್ತಿ, ಕಬ್ಬಡಿ ಸೇರಿದಂತೆ ಕೆಲವು ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸುತ್ತೇವೆ. ಇದರಿಂದ ಯುವಕರಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗ ಜೈಲಿನಿಂದ ಪ್ರಾಣ ಬೆದರಿಕೆ ಹಾಕಿರುವ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ತನಿಖೆ ನಡೆಸುತ್ತೇವೆ. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಮಗ್ರ ತನಿಖೆ ನಡೆಸಿ ಇದರಲ್ಲಿ ಯಾರೇ ಭಾಗಿಯಾಗಿರಲಿ ಖಂಡಿತವಾಗಿಯೂ ಕಾನೂನು ಪ್ರಕಾರವೇ ಶಿಕ್ಷೆಯಾಗಲಿದೆ ಎಂದರು.

ಬೆದರಿಕೆ ಕರೆಯ ಹಿಂದೆ ಯಾರಿದ್ದಾರೆ, ಹಿನ್ನೆಲೆ ಏನು ಹಾಗೂ ಯಾರು ಮಾರ್ಗದರ್ಶನ ನೀಡಿದ್ದಾರೆ ಎಂಬುದು ಮುಖ್ಯವಾಗಿದ್ದು, ಅದನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದರು.

ಯುವ ಜನೋತ್ಸವವನ್ನು, ಯುವ ವಿನಾಶೋತ್ಸವ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಟ್ವೀಟ್ ಕುರಿತು ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್‍ನವರದ್ದು ಯಥಾ ಬುದ್ಧಿ, ತಥಾ ಮಾತುಗಳು. ಅವರಿಗೆ ವಿನಾಶದ ಕನಸುಗಳು, ಅದರಲ್ಲೂ ಕಾಂಗ್ರೆಸ್ ವಿನಾಶದ ಕನಸುಗಳು ಬೀಳುತ್ತಿವೆ. ಎಲ್ಲದರಲ್ಲೂ ಅವರು ವಿನಾಶವನ್ನೇ ನೋಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಾರಿ ಬೆಂಗಳೂರು ಇತಿಹಾಸ ತಿಳಿಸುವ ಫಲಪುಷ್ಪ ಪ್ರದರ್ಶನ : ಸಚಿವ ಮುನಿರತ್ನ

ಯಾವುದೇ ಒಳ್ಳೆಯ ಕೆಲಸವನ್ನು ಮೆಚ್ಚುವುದು ಕಾಂಗ್ರೆಸ್ ನವರಿಗೆ ಗೊತ್ತಿಲ್ಲ. ಇತ್ತೀಚೆಗೆ ಅವರ ಭಾಷೆ, ನಡವಳಿಕೆ ಹಾಗೂ ಚಿಂತನೆ ಕೀಳುಮಟ್ಟದಿಂದ ಕೂಡಿವೆ. ದೇಶ ಹಾಗೂ ರಾಜ್ಯದ ಪ್ರಗತಿ ವಿಚಾರದಲ್ಲಿ ತೀರಾ ತಳಮಟ್ಟಕ್ಕಿಳಿಯುತ್ತಿರುವುದು, ಅವರ ಹತಾಶೆಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

CM Bommai, Congress, promises, assembly elections,

Articles You Might Like

Share This Article