ತೂಗುಯ್ಯಾಲೆಯಲ್ಲಿ ಸಿಎಂ ದಾವೋಸ್ ಪ್ರವಾಸ

ಬೆಂಗಳೂರು, ಮೇ 21- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಹುನಿರೀಕ್ಷಿತ ದಾವೋಸ್ ಪ್ರವಾಸ ಇನ್ನು ತೂಗುಯ್ಯಾಲೆಯಲ್ಲಿದೆ.
ಈಗಾಗಲೇ ನಿಗದಿಯಾಗಿರುವಂತೆ ನಾಳೆ ಬೆಳಗ್ಗೆ ಬೊಮ್ಮಾಯಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಅವರ ಜತೆ ದಾವೋಸ್‍ಗೆ ತೆರಳಬೇಕಿತ್ತು.

ನಾಳೆ ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈ ಮೂಲಕ ದಾವೋಸ್‍ಗೆ ತೆರಳುವ ಪ್ರವಾಸ ನಿನ್ನೆಯಷ್ಟೇ ನಿಗದಿಯಾಗಿತ್ತು. ಇದೀಗ ಬಸವರಾಜ ಬೊಮ್ಮಾಯಿ ಅವರೇ ಹೇಳಿರುವಂತೆ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇರುವುದರಿಂದ ಪರಿಸ್ಥಿತಿ ನೋಡಿಕೊಂಡು ತೀರ್ಮಾನಿಸುತ್ತೇನೆ ಎಂದು ಹೇಳಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ.

ದೆಹಲಿಗೆ ತೆರಳಿದ್ದ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗದೆ ಬರಿಗೈಯಲ್ಲಿ ಹಿಂದುರುಗಿದ್ದಾರೆ. ಇದೇ ಸಂದರ್ಭದಲ್ಲಿ ದಾವೋಸ್‍ಗೆ ಪರಿಸ್ಥಿತಿ ನೋಡಿಕೊಂಡು ಹೋಗುತ್ತೇನ ಎಂದು ಹೇಳಿರುವುದು ನಾನಾ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.