ಬೆಂಗಳೂರು,ಆ.5- ಅಜಾದಿ ಅಮೃತೋತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ನವದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಅಜಾದಿ ಅಮೃತೋತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ಬಿಜೆಪಿ ಹೈಕಮಾಂಡ್ ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಕೂಡ ದೆಹಲಿಗೆ ತೆರಳುತ್ತಿದ್ದಾರೆ.
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆಯಲಿದೆ. ಎಲ್ಲಾ ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದು, ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ. ಭಾನುವಾರ ಸಂಜೆ ಬೊಮ್ಮಾಯಿ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.