ನವ ವರ್ಷ ಸುಖ – ಸಂತಸಗಳನ್ನು ಹೊತ್ತು ತರಲಿ: ಸಿಎಂ ಬೊಮ್ಮಾಯಿ ಶುಭಾಶಯ

Social Share

ಬೆಂಗಳೂರು,ಜ.1- ಇಂದು ನಾಡಿನಾದ್ಯಂತ 2022ರ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ವರ್ಷದ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ನಾಡಿನ ಸಮಸ್ತ ಜನತೆಗೆ 2022ರ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯಗಳು.
ನವ ವರ್ಷ ಎಲ್ಲರಿಗೂ ಸುಖ – ಸಂತಸಗಳನ್ನು ಹೊತ್ತು ತರಲಿ. ಜನರ ಆರೋಗ್ಯದ ದೃಷ್ಟಿಯಿಂದ ಬಹಿರಂಗ ಸಂಭ್ರಮಾಚರಣೆಗಳಿಂದ ದೂರವಿದ್ದು, ಸಾಂಕ್ರಾಮಿಕದ ಸವಾಲುಗಳನ್ನು ನಾವೆಲ್ಲರೂ ಕೂಡಿ ಎದುರಿಸೋಣ. ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಕೊರೊನಾ ಮಣಿಸೋಣ ಎಂದಿದ್ದಾರೆ.
ಹೊಸ ಭರವಸೆಯೊಂದಿಗೆ ನೂತನ ವರ್ಷ ಸ್ವಾಗತಿಸುವ ಈ ಸಂಭ್ರಮದ ಸಮಯದಲ್ಲಿ ನಾವೆಲ್ಲರೂ ಸಾಂಕ್ರಾಮಿಕ ಹರಡದಂತೆ ಮುನ್ನೆಚ್ಚರಿಕೆ ವಹಿಸೋಣ. ತಪ್ಪದೇ ಮಾಸ್ಕ್ ಧರಿಸಿ, ಭೌತಿಕ ಅಂತರ ಕಾಯ್ದುಕೊಂಡು, ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸೋಣ, ಇದೇ ದೃಢ ಸಂಕಲ್ಪದೊಂದಿಗೆ ನೂತನ ವರ್ಷವನ್ನು ಸ್ವಾಗತಿಸೋಣ ಎಂದು ಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ಎಲ್ಲರಿಗೂ ನೂತನ ವರ್ಷದ ಶುಭಾಶಯಗಳು. ಹೊಸ ವರ್ಷವು ನವಚೈತನ್ಯ, ನವೋತ್ಸಾಹಗಳನ್ನು ಹೊತ್ತು ತರಲಿ. ಕಳೆದು ಹೋದ ದಿನಗಳ ನೋವು ಮರೆತು, ಹೊಸ ಭರವಸೆಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ. ಸಾಂಕ್ರಾಮಿಕದ ಸಂಕಷ್ಟಗಳನ್ನು ಗೆದ್ದು, ಸುಖ, ಸಂತೋಷ, ಯಶಸ್ಸುಗಳ ಆರೋಗ್ಯ ಪೂರ್ಣ ಸಮಾಜವನ್ನು ಕಟ್ಟೋಣ. ಎಲ್ಲರ ಕನಸುಗಳು ಈಡೇರಲಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

Articles You Might Like

Share This Article