ಬೆಂಗಳೂರು, ಜ.12- ಫೆಬ್ರವರಿ 17ರಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆ.
ಬಜೆಟ್ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರಗಿಗೆ ಭೇಟಿ ನೀಡಿದ ಮರುದಿನವೇ ಅಂದರೆ ಜ.20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಗಳೊಂದಿಗೆ ಸಿಎಂ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆ.
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗಲೇ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲು ಮುಂದಾಗಿದ್ದು, ಇದು ಪ್ರಸ್ತುತ ಸರ್ಕಾರ ಕೊನೆಯ ಬಜೆಟ್ ಆಗಿರಲಿದೆ. ಹೀಗಾಗಿ ಮತದಾರರನ್ನು ಓಲೈಸಲು ಮುಖ್ಯಮಂತ್ರಿಗಳು ಹಲವು ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.
ಸತ್ಯ ಹೇಳಿದ ದಿನವೇ ಕಾಂಗ್ರೆಸ್ ಸಾವು
ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ನೀರಾವರಿ ಯೋಜನೆಗಳತ್ತ ಹೆಚ್ಚಿನ ಗಮನ ಹರಿಸಲಿದ್ದಾರೆ. ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಯೋಜನೆಗಳನ್ನು ಅವರು ಘೋಷಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, 2023-24ರ ಬಜೆಟ್ನ ಪ್ರಾಥಮಿಕ ಸುತ್ತಿನ ಸಭೆಗಳು ಈಗಾಗಲೇ ಮುಗಿದಿವೆ. ಫೆ.20ರ ನಂತರ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿದ್ದಾಗಲೆಲ್ಲೇ ಪ್ರತಿದಿನ ಸಭೆಗಳನ್ನು ನಡೆಸಲಿದ್ದಾರೆ.
163 ಕೋಟಿ ಜಾಹೀರಾತು ಖರ್ಚು ಪಾವತಿಸಲು ಆಪ್ ಸರ್ಕಾರಕ್ಕೆ ನೋಟೀಸ್
ಕೋವಿಡ್ ನಂತರದ ಅಬಕಾರಿ ಇಲಾಖೆ ಸೇರಿದಂತೆ ತೆರಿಗೆ ಸಂಗ್ರಹಣೆಗಳು ಗಮನಾರ್ಹವಾಗಿ ಹೆಚ್ಚಾದ ಕಾರಣ ಬೊಮ್ಮಾಯಿ ಅವರು ಈ ಬಾರಿ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಗಾತ್ರವು ದೊಡ್ಡದಾಗಿರಲಿದೆ ಎಂದು ಹೇಳಲಾಗುತ್ತಿದೆ.