ತನಿಖಾ ಸಂಸ್ಥೆಗಳಿಗೆ ಮಂಗಳೂರು ಸ್ಪೋಟ ಅಗತ್ಯ ಮಾಹಿತಿ ನೀಡಲು ಸಿಎಂ ಸೂಚನೆ

Social Share

ಬೆಂಗಳೂರು,ನ.21-ಕಳೆದ ಶನಿವಾರ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿ ಬಳಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್ ಜೊತೆ ದೂರವಾಣಿ ಮೂಲಕ ಘಟನೆ ಕುರಿತಂತೆ ಮಾಹಿತಿ ಪಡೆದ ಅವರು, ತನಿಖೆ ನಡೆಸುತ್ತಿರುವ ಎನ್‍ಐಎ, ಐಬಿ ಹಾಗೂ ರಾ ಅಕಾರಿಗಳಿಗೆ ಸಂಪೂರ್ಣವಾದ ಮಾಹಿತಿ ಒದಗಿಸುವಂತೆ ನಿರ್ದೇಶನ ನೀಡಿದರು.

ಈಗಾಗಲೇ ಎರಡು ದಿನಗಳಿಂದ ತನಿಖೆ ನಡೆಸಲಾಗುತ್ತಿದ್ದು, ಪೊಲೀಸರ ಬಳಿ ಇರುವ ಮಾಹಿತಿ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳಿಗೆ ನೀಡಬೇಕು. ಅವರಿಗೆ ಅಗತ್ಯವಿರುವ ಸಹಕಾರವನ್ನು ನೀಡುವಂತೆಯೂ ಸಿಎಂ ಅವರು ಡಿಜಿಗೆ ಸೂಚನೆ ಕೊಟ್ಟರು.

ಭಾರತ-ಅಮೇರಿಕ ನಡುವೆ ಅತ್ಯುತ್ತಮ ಸಂಬಂಧವಿದೆ : ಶ್ವೇತಭವನದ ಉನ್ನತಾಧಿಕಾರಿ

ಕೇಂದ್ರ ತನಿಖಾ ಸಂಸ್ಥೆಗಳಿಗೆ ಮಾಹಿತಿ ಒದಗಿಸಲು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಅವರ ಜೊತೆ ಸಮನ್ವಯ ಸಾಧಿಸಬೇಕು. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಎಚ್ಚರಿಕೆ ಹೆಜ್ಜೆ ಇಡಬೇಕೆಂದು ಸೂದ್ ಅವರಿಗೆ ಸಿಎಂ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಪ್ರತಿಕ್ಷಣದ ಮಾಹಿತಿಯನ್ನು ತಮಗೆ ಒದಗಿಸಬೇಕು. ತನಿಖಾ ಪ್ರಗತಿ ವರದಿ ಯಾವ ಹಂತದಲ್ಲಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರನ ಹಿನ್ನಲೆ, ಈತನ ಹಿಂದೆ ಯಾರಾದರೂ ಉಗ್ರರು ಇದ್ದಾರೆಯೇ? ಯಾವ ಸಂಘಟನೆಗೆ ಸೇರಿದವರು, ಇವರ ಉದ್ದೇಶ ಎಂಬುದರ ಬಗ್ಗೆ ಇಂಚಿಂಚು ಮಾಹಿತಿ ನೀಡಬೇಕೆಂದು ಸೂಚನೆ ನೀಡಿದ್ದಾರೆ.

ಈಗಾಗಲೇ ಮಂಗಳೂರುನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಹಾಗೂ ಶಿವಮೊಗ್ಗ ಮತ್ತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದಲೂ ನಾವು ಮಾಹಿತಿ ಪಡೆದಿದ್ದೇವೆ.

ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದು 12 ಮಂದಿ ಸಾವು

ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಎನ್ನಲಾದ ಶಾರೀಕ್ ಮೊಹಮ್ಮದ್, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಸೊಂಡೆಗೊಪ್ಪ ನಿವಾಸಿ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಈತನ ದೇಹ ಶೇ.50ರಷ್ಟು ಸುಟ್ಟಿರುವುದರಿಂದ ಮಾಹಿತಿ ಪಡೆಯಲು ನಮಗೆ ಸಾಧ್ಯವಾಗುತ್ತಿಲ್ಲ. ಆರೋಗ್ಯ ಸ್ಥಿತಿ ಸುಧಾರಿಸಿದ ಬಳಿಕ ಹೆಚ್ಚಿನ ಮಾಹಿತಿ ಲಭಿಸಲಿದೆ. ನಾವು ಪ್ರಕರಣವನ್ನು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಪ್ರವೀಣ್‍ಸೂದ್ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದ್ದಾರೆ.

ಪ್ಲಾಟ್‍ಫಾರ್ಮ್‍ಗೆ ಗೂಡ್ಸ್ ರೈಲು ಡಿಕ್ಕಿ : ಇಬ್ಬರು ಸಾವು

ಶಂಕಿತ ಉಗ್ರನ ಹಿಂದೆ ಯಾರ್ಯಾರ ಕೈವಾಡವಿದೆ? ಆತನಿಗೆ ಸಹಕಾರ ಕೊಟ್ಟವರು ಯಾರು ಎಂಬುದನ್ನು ಪತ್ತೆ ಮಾಡಬೇಕು. ರಾಜ್ಯಾದ್ಯಂತ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿಭದ್ರತೆಯನ್ನು ಹೆಚ್ಚಿಸುವಂತೆ ಸೂಚಿಸಿದ್ದಾರೆ.

CM Bommai, Mangalore, blast, central, investigation,

Articles You Might Like

Share This Article