ಅತಿವೃಷ್ಟಿಗೊಳಗಾದ ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಸಭೆ

Social Share

ಬೆಂಗಳೂರು,ಜು.15- ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಅತಿವೃಷ್ಟಿ ಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದ ವಿವಿಧೆಡೆ ಅತಿಯಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ದೇವನಹಳ್ಳಿಯಿಂದ ವಿಡಿಯೋ ಕಾನರೆನ್ಸ್ ಮೂಲಕ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯ ಪುರ, ರಾಯಚೂರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದು, ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಮತ್ತು ಹಾನಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Articles You Might Like

Share This Article