ಹುಬ್ಬಳ್ಳಿ, ಸೆ,30: ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್‍ಎಸ್‍ಎಸ್ ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರ ಅವರು, ಪಿಎಫ್‍ಐ ಯಾಕೆ ನಿಷೇಸಿದ್ದೀರಿ ಎಂದು ಕೇಳಲು ಕಾಂಗ್ರೆಸ್‍ಗೆ ಯಾವ ಆಧಾರಗಳಿಲ್ಲ. ಏಕೆಂದರೆ ಅವರೇ ಪಿಎಫ್‍ಐ ಪ್ರಕರಣಗಳನ್ನು ಹಿಂಪಡೆದಿದ್ದರು. ಈಗ ಅದನ್ನು ಮರೆಮಾಚಲು ಆರ್‍ಎಸ್‍ಎಸ್‍ನಿಷೇಧಿಸಲು ಹೇಳುತ್ತಾರೆ. ಅದನ್ನು ಯಾಕೆ ನಿಷೇಧಿಸಬೇಕೆಂದು ಹೇಳುವುದಿಲ್ಲ ಎಂದು ಗುಡುಗಿದರು.
ದೀನದಲಿತರು, ಅನಾಥರಿಗೆ ಹಲವಾರು ಸಂಸ್ಥೆಗಳನ್ನು ಕಟ್ಟಿದ್ದಾರೆ. ಪ್ರವಾಹ ಮುಂತಾದ ಸಂಕಷ್ಟದ ಸಂದರ್ಭದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಾರೆ. ಆರ್‍ಎಸ್‍ಎಸ್ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆ. ಈ ಮಟ್ಟಕ್ಕೆ ಸಿದ್ದರಾಮಯ್ಯ ಅವರು ಇಳಿಯಬಾರದಿತ್ತು ಎಂದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಏರ್ಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನನ್ನ ವ್ಯಾಖ್ಯಾನ ಇಲ್ಲ ಎಂದರು. ಪ್ರಥಮ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಹೀಗಾಗುತ್ತಿರಬಹುದು ಎಂದರು.