ಬೆಂಗಳೂರು,ಜ.4- ಹಣಕಾಸು ಖಾತೆಯನ್ನು ಹೊಂದಿರುವ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17ರಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದು, ಜನಪ್ರಿಯ ಯೋಜನೆ ಗಳನ್ನು ಘೋಷಿಸುವ ಮೂಲಕ ಮತದಾರರ ಮನಗೆಲ್ಲಲು ಮುಂದಾಗಿ ದ್ದಾರೆ.
ಈಗಾಗಲೇ ಬಜೆಟ್ ಮಂಡನೆಗೆ ಅಗತ್ಯ ಸಿದ್ದತೆಗಳನ್ನು ಕೈಗೊಂಡಿ ರುವ ಅವರು ಈ ತಿಂಗಳ 2ನೇ ವಾರದ ನಂತರ ಇಲಾಖಾವಾರು ಸಚಿವರು ಮತ್ತು ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ಜ.1ರಂದು ಹೊಸ ವರ್ಷದ ಶುಭಾಷಯ ಕೋರಲು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತಿತರರಿಗೆ ಬಜೆಟ್ ಮಂಡನೆಯ ಪೂರ್ವ ಸಿದ್ದತೆಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸಾಮಾನ್ಯವಾಗಿ ಪ್ರತಿ ವರ್ಷ ಜನವರಿ ತಿಂಗಳ 2ನೇ ವಾರದಲ್ಲಿ ಪ್ರಸಕ್ತ ವರ್ಷದ ಜಂಟಿ ಅಧಿವೇಶನ ನಂತರ ಬಜೆಟ್ ಮಂಡನೆಯಾಗುತ್ತಿತ್ತು. ಆದರೆ ಕಳೆದೆರಡು ವರ್ಷಗಳಿಂದ ಈ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿರುವ ಸರ್ಕಾರ ಜಂಟಿ ಅಧಿವೇಶನ ಮತ್ತು ಬಜೆಟ್ ಮಂಡನೆಯನ್ನು ಏಕಕಾಲದಲ್ಲಿ ನಡೆಸಲು ಮುಂದಾಗಿದೆ.
ಸರ್ಕಾರಿ ವಿದ್ಯುತ್ ಕಂಪೆನಿಗಳ ಖಾಸಗೀಕರಣ ವಿರೋಧಿಸಿ ಸಿಬ್ಬಂದಿಗಳ ಮುಷ್ಕರ
ಫೆ.16ರಂದು ಗುರುವಾರ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ಸಿಎಂ ಬೊಮ್ಮಾಯಿ ಅವರು ಶುಕ್ರವಾರ ಬಜೆಟ್ ಮಂಡಿಸಿ ನಂತರ ಸೋಮವಾರದಿಂದ ಬಜೆಟ್ ಮೇಲೆ ಚರ್ಚೆ ಆರಂಭವಾಗಲಿದೆ.
ಏಪ್ರಿಲ್ ತಿಂಗಳ ಮಧ್ಯಭಾಗದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಸಹಜವಾಗಿ ಮತದಾರರಿಗೆ ಆಕರ್ಷಣೀಯವಾದ ಯೋಜನೆಗಳನ್ನು ಘೋಷಣೆ ಮಾಡುವ ಲೆಕ್ಕಾಚಾರದಲ್ಲಿ ಬೊಮ್ಮಾಯಿ ಇದ್ದಾರೆ.
ಇತ್ತ ರಾಜ್ಯ ಕೋವಿಡ್ ಲಾಕ್ ಡೌನ್ ನಿಂದ ಚೇತರಿಕೆ ಕಾಣುತ್ತಿದ್ದು, ಗುರಿ ಮೀರಿ ಆದಾಯ ಸಂಗ್ರಹ ಸಿಎಂ ಬೊಮ್ಮಾಯಿ ನಿಟ್ಟುಸಿರು ಬಿಡುವಂತಾಗಿದೆ. ಆದಾಯ ಸಂಗ್ರಹ ಉತ್ತಮವಾಗಿರುವುದರಿಂದ ಚುನಾವಣಾ ಬಜೆಟ್ ಮಂಡನೆಗೆ ಹಾದಿ ಸುಗಮಗೊಳಿಸಿದೆ.
ಹೆಚ್ಚುವರಿ ಬಜೆಟ್ ಮಂಡನೆಗೆ ತಯಾರಿ: ಈ ಬಾರಿ ಸಿಎಂ ಬೊಮ್ಮಾಯಿ ಹೆಚ್ಚುವರಿ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಲಾಕ್ಡೌನ್ ಹಿನ್ನೆಲೆ ಆದಾಯ ಕೊರತೆಯ ಬಜೆಟ್ ಮಂಡನೆಯಾಗಿತ್ತು. ಈ ಬಾರಿ ಹೆಚ್ಚುವರಿ ಆಯವ್ಯಯ ಮಂಡನೆ ಮಾಡಲು ಸಿಎಂ ಸಿದ್ಧತೆ ನಡೆಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ರಾಜ್ಯದ ಆರ್ಥಿಕತೆ ಚೇತರಿಕೆ ಕಂಡಿದ್ದು, ತೆರಿಗೆ ಮೂಲಗಳು ಗುರಿ ಮೀರಿ ಆದಾಯ ಸಂಗ್ರಹ ಮಾಡುತ್ತಿವೆ. 2022-23 ಸಾಲಿನ ಮೊದಲಾರ್ಧ ವರ್ಷದಲ್ಲಿ ರಾಜ್ಯದ ಬೊಕ್ಕಸಕ್ಕೆ 1 ಲಕ್ಷ ಕೋಟಿಗೂ ಅಧಿಕ ರಾಜಸ್ವ ಸ್ವೀಕೃತಿಯಾಗಿದೆ. ಇದರಲ್ಲಿ ಕೇಂದ್ರದ ಸಹಾಯಾನುದಾನ, ತೆರಿಗೆ ಪಾಲು ಸೇರಿದೆ. ಇತ್ತ ಜಿಎಸ್ಟಿ ಸಂಗ್ರಹ ನಿರೀಕ್ಷೆಗೂ ಮೀರಿ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹಿಸುವ ಎಲ್ಲ ಇಲಾಖೆಗಳು ಬಜೆಟ್ ಗುರಿ ಮೀರಿ ಆದಾಯ ಸಂಗ್ರಹಿಸುತ್ತಿರುವುದು ಸಿಎಂ ಬೊಮ್ಮಾಯಿ ಅವರನ್ನು ನಿರಾಳರನ್ನಾಗಿಸಿದೆ.
ಹೀಗಾಗಿ ಕಳೆದೆರಡು ವರ್ಷಗಳಿಂದ ಆದಾಯಗಿಂತ ವೆಚ್ಚವೇ ಹೆಚ್ಚಾಗಿದ್ದ ಕಾರಣ ಆದಾಯ ಕೊರತೆಯ ಬಜೆಟ್ ಮಂಡನೆಯಾಗಿತ್ತು. ಆದರೆ ಈ ಬಾರಿ ಭರಪೂರ ತೆರಿಗೆ ಸಂಗ್ರಹವಾಗುತ್ತಿರುವುದರಿಂದ ವೆಚ್ಚಕ್ಕಿಂತ ಆದಾಯ ಹೆಚ್ಚಿರಲಿದೆ. ಆದಾಯ ಕ್ರೋಢೀಕರಣ ಸಹಜ ಸ್ಥಿತಿಗೆ ಬಂದಿರುವ ಕಾರಣ ಈ ಬಾರಿ ಹೆಚ್ಚುವರಿ ಆದಾಯ ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಕುಡುಕ
ಬಡವರಿಗೆ, ಮಹಿಳೆಯರಿಗೆ ಹಾಗೂ ರೈತರನ್ನು ಕೇಂದ್ರೀಕರಿಸಿ ಹೊಸ ಯೋಜನೆಗಳನ್ನು ಘೋಷಿಸಲು ಸಿಎಂ ಬೊಮ್ಮಾಯಿ ತಯಾರಿ ನಡೆಸುತ್ತಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ಈ ಬಾರಿಯ ಬಜೆಟ್ನಲ್ಲಿ ರೈತರಿಗೆ ಡೀಸೆಲ್ ಸಹಾಯಧನ ವಿಸ್ತರಿಸುವ ಘೋಷಣೆ ಮಾಡಲಿದ್ದಾರೆ. ಸಾಂಪ್ರದಾಯಿಕ ವೃತ್ತಿ ಮಾಡಲು ಇಚ್ಚಿಸುವವರಿಗೆ 50,000 ರೂ. ಧನಸಹಾಯ ನೀಡಲು ಸಿಎಂ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ.
ಆ ಮೂಲಕ ಗ್ರಾಮೀಣ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಯೋಜನೆ ರೂಪಿಸಲಿದ್ದಾರೆ ಎನ್ನಲಾಗಿದ್ದು, ಉಳಿದಂತೆ ನೀರಾವರಿ ಯೋಜನೆಗಳಿಗೆ ಭರ್ಜರಿ ಅನುದಾನ ಬಿಡುಗಡೆ ಮಾಡಲಿದ್ದಾರೆ, ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ಏಳನೇ ವೇತನವನ್ನು ಘೋಷಿಸುವ ಚಿಂತನೆ ಇದೆ ಎಂದು ತಿಳಿದುಬಂದಿದೆ.
ಈಗಾಗಲೇ ಆರ್ಥಿಕ ಇಲಾಖೆ ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಸುತ್ತೋಲೆ ಹೊರಡಿಸಿ, ಅಳೆದು ತೂಗಿ ವೆಚ್ಚ ಅಂದಾಜನ್ನು ಮಾಡುವಂತೆ ಸೂಚನೆ ನೀಡಿದೆ.
ಭಾರತ- ಪಾಕ್ ಗಡಿಯಲ್ಲಿ ನೈಟ್ ಕರ್ಫ್ಯೂ
ಏಕ ಉದ್ದೇಶದ ಯೋಜನೆಗಳನ್ನು ವಿಲೀನಗೊಳಿಸಿ ಒಂದು ಯೋಜನೆಯಾಗಿ ಪ್ರಸ್ತಾವನೆ ಕಳುಹಿಸಲು ಇಲಾಖೆ ಅಕಾರಿಗಳಿಗೆ ಸೂಚನೆ ನೀಡಲಾಗಿದೆ. ವೆಚ್ಚಗಳ ಅಂದಾಜನ್ನು ಜಾಗರೂಕತೆಯಿಂದ ಮಾಡುವಂತೆ ತಿಳಿಸಿದೆ. ಯಾವುದೇ ಗೊಂದಲ, ದುಂದುವೆಚ್ಚ ಇಲ್ಲದಂತೆ ನಿಖರ ವೆಚ್ಚ ಅಂದಾಜನ್ನು ಕಳುಹಿಸಿಕೊಡುವಂತೆ ಆರ್ಥಿಕ ಇಲಾಖೆ ಕೋರಿದೆ.
CM Bommai, prepares, budget 2023-24,