ನವದೆಹಲಿ, ನ.29- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲು ಸಮಯ ಕೇಳಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಡ್ಡ ಅವರನ್ನು ಭೇಟಿಯಾಗಲು ಸಮಯ ಕೇಳಿದ್ದು, ನಾಳೆ ಸಿಗುವ ಸಾಧ್ಯತೆ ಇದೆ. ರಾಜ್ಯದಲ್ಲಿನ ವಿದ್ಯಮಾನಗಳು, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಗಡಿಯಲ್ಲಿ ಡ್ರೋನ್ ಹೊಡೆದುರುಳಿಸಿದ ಬಿಎಸ್‍ಎಫ್ ಪಡೆ
ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್, ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗುತ್ತಿರುವುದಾಗಿ ತಿಳಿಸಿದರು. ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಬಹುನಿರೀಕ್ಷಿತ ಮೇಕೆದಾಟು, ಭದ್ರ ಮೇಲ್ದಂಡೆ ಹಾಗು ಮಹದಾಯಿ ಯೋಜನೆ ಬಗ್ಗೆ ಚರ್ಚೆ ಮಾಡಿ ಕೇಂದ್ರದ ಮಂಜೂರಾತಿ ಕೋರಲಾಗುವುದು.
ರಾಜ್ಯದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ರಾಜನಾಥ್ ಸಿಂಗ್ ಅವರನ್ನು ಆಹ್ವಾನಿಸಲಾಗುವುದು.
ರಾಜ್ಯದ ಪರಿಸರ ಸಂಬಂತ ಯೋಜನೆಗಳ ಕುರಿತಂತೆ ಸಚಿವ ಭೂಪೇಂದ್ರ ಯಾದವ್ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
“ಸೈಲೆಂಟ್ ಸುನೀಲ್ ಮೇಲೆ ಯಾವುದೇ ಪ್ರಕರಣವಿಲ್ಲ”
ಕಾಂಗ್ರೆಸ್‍ನಲ್ಲಿ ಎಷ್ಟು ಮಂದಿ ರೌಡಿಶೀಟರ್ ಇದ್ದಾರೆ ಎಂಬುದನ್ನು ಲೆಕ್ಕ ಹಾಕಿಕೊಳ್ಳಿ ಎಂದು ತಿರುಗೇಟು ನೀಡಿದರು. ರೌಡಿಶೀಟರ್ ಸೈಲೆಂಟ್ ಸುನೀಲ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿರುವ ಆರೋಪದ ಬಗ್ಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
CM Bommai, rowdy, sheeter, Congress,