ಬೆಂಗಳೂರು,ಡಿ.14- ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕಣ್ಣೆತ್ತಿ ನೋಡದವರಿಂದ ನಾವು ಕಲಿಯಬೇಕಾಗಿದ್ದು ಏನೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾಶಿವ ಆಯೋಗ ವರದಿ ನೀಡಿ ವರ್ಷಗಳೇ ಕಳೆದಿದ್ದವು. ಐದು ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಕಣ್ಣೆತ್ತಿ ನೋಡಿಲಿಲ್ಲ. ನಾವು ಅವರಿಂದ ಕಲಿಯಬೇಕಾದುದು ಏನೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರು ಇನ್ನೊಬ್ಬರ ಬಗ್ಗೆ ಮಾತನಾಡುವ ಮೊದಲು ತಾವು ಯಾವ ರೀತಿ ನಡೆದುಕೊಂಡಿದ್ದೀರಿ ಎನ್ನುವುದನ್ನು ಒಮ್ಮೆ ತಿರುಗಿ ನೋಡಿಕೊಂಡರೆ ಒಳ್ಳೆಯದು. ನಮ್ಮ ಬದ್ದತೆ ಏನೆಂಬುದು ಎಲ್ಲರಿಗೂ ಗೊತ್ತಿದೆ. ಇಂಥ ಗಟ್ಟಿ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ನಿಮಗೆ ಏಕೆ ಇರಲಿಲ್ಲ ಎಂದು ಪ್ರಶ್ನಿಸಿದರು.
ದೆಹಲಿಯಲ್ಲಿ ಖರ್ಗೆ ನೇತೃತ್ವದಲ್ಲಿ ನಡೆದ ಕರ್ನಾಟಕ ನಾಯಕರ ಸಭೆಯ ಸೀಕ್ರೆಟ್ ಬಿಚ್ಚಿಟ್ಟ ಕಾಂಗ್ರೆಸ್
ಹುಬ್ಬಳ್ಳಿಯಲ್ಲಿ ಇದೇ ಸಮುದಾಯವು ಸಮಾವೇಶ ಮಾಡಿದಾಗ ಬರೀ ದೀಪ ಹಚ್ಚಿ ಬಂದು ನಮಗೆ ನೀತಿಪಾಠ ಮಾಡುವ ಅಗತ್ಯವಿಲ್ಲ. ನಾವು ಬದ್ದತೆಯಿಂದ ನಡೆದುಕೊಂಡಿದ್ದೇವೆ. ಕಾನೂನು ಪ್ರಕಾರ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಂಡಿದ್ದೇವೆ. ಇಂತಹ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ದಿಟ್ಟತನ ಬೇಕು ಎಂದರು.
ವರದಿಯನ್ನೇ ಸಿದ್ದರಾಮಯ್ಯ ಅವರು ನೋಡಿರಲಿಲ್ಲ. ಐದು ವರ್ಷ ಕಣ್ಣೊರೆಸುವ ತಂತ್ರ ಅಮೇಲಿರಲಿ. ವರದಿ ಹೇಗಿದೆ ಎಂದು ಸೌಜನ್ಯಕ್ಕಾದರೂ ನೋಡಿರಲಿಲ್ಲ. ಇಂಥವರು ಇನ್ನೊಬ್ಬರ ಬಗ್ಗೆ ಮಾತನಾಡಲು ನೈತಿಕತೆ ಇದೆಯೇ ಎಂದು ಪ್ರಶ್ನೆ ಮಾಡಿದರು.
ಸಂಜೆ ದೆಹಲಿಗೆ ತೆರಳುತ್ತೇನೆ. ಗೃಹ ಸಚಿವ ಅಮಿತ್ ಷಾ ಅವರು ಸಭೆ ಕರೆದಿದ್ದಾರೆ. ಅದರಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ನಿಲುವು ಏನೆಂಬುದನ್ನು ತಿಳಿಸುತ್ತೇನೆ. ಈಗಾಗಲೇ ಅವರಿಗೆ ಎಲ್ಲ ಮಾಹಿತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.
ಬಗರ್ ಹುಕುಂ ಭೂಮಿ ಮಂಜೂರು ಕುರಿತು ಕಂದಾಯ ಇಲಾಖೆ ಮಹತ್ವದ ಆದೇಶ
ಮಹಾರಾಷ್ಟ್ರ ಆರು ದಶಕಗಳಿಂದ ಗಡಿ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ನಾವು ಹಾಗಲ್ಲ ನಮಗೆ ನಮ್ಮ ನೆಲ-ಜಲ ಗಡಿ ರಕ್ಷಣೆ ನಮಗೆ ಮುಖ್ಯವಾಗಿದೆ ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ ಅವರು ಅಮಿತ್ ಷಾ ಜೊತೆ ಮಾತುಕತೆ ನಡೆಸಲಾಗುವುದು ಎಂದಷ್ಟೇ ಹೇಳಿದರು.
CM Bommai, Siddaramaiah, BJP, Congress,