ತಳಮಟ್ಟದಲ್ಲಿ ಪಕ್ಷ ಪ್ರಬಲವಾಗಿದೆ, ಮತ್ತೆ ಅಧಿಕಾರಕ್ಕೇರುತ್ತೇವೆ : ಬೊಮ್ಮಾಯಿ

Social Share

ಹುಬ್ಬಳ್ಳಿ,ಮಾ.10- ಬಿಜೆಪಿಗೆ ಬರಲಿರುವ ವಿಧಾನಸಭೆ ಚುನಾವಣೆ ಯಲ್ಲಿ ಸ್ಪಷ್ಟ ಜನಾದೇಶ ದೊರಕಲಿದ್ದು, ಕಾಂಗ್ರೆಸ್‍ಗೆ ಸಮೀಕ್ಷೆಯಲ್ಲಿ 65 ಸೀಟ್‍ಗಳು ಬರಬಹುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಮಾಡಿರುವ ಕೆಲಸಗಳು ಜನರಿಗೆ ತಲುಪಿದೆ. ಹೀಗಾಗಿ ಜನರು ನಮಗೆ ಆಶೀರ್ವಾದ ಮಾಡಲಿದ್ದಾರೆ. ಡಿ.ಕೆ.ಶಿವಕುಮಾರ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್‍ಗೆ ಹೆಚ್ಚೆಂದರೆ 65 ಕ್ಷೇತ್ರಗಳಲ್ಲಿ ಗೆಲುವು ದೊರೆಯಬಹುದು ಎಂದು ವ್ಯಂಗ್ಯವಾಡಿದರು.

ಚುನವಾಣೆಗೆ ನಮ್ಮದು ಮೂರನೆ ಹಂತದ ಸಿದ್ದತೆ ನಡೆಯುತ್ತದೆ. ಪ್ರತಿ ವಿಧಾನಸಬಾ ಕ್ಷೇತ್ರದಲ್ಲಿ ಒಂದಿಲ್ಲೊಂದು ಚಟುವಟಿಕೆಗಳು ನಡೆಯುತ್ತವೆ. ನಮ್ಮ ಪಕ್ಷದ ಶಕ್ತಿ ತಳಮಟ್ಟದಲ್ಲಿ ಇದೆ ಎಂದು ವ್ಯಾಖ್ಯಾನಿಸಿದರು.

BIG NEWS : ಕರ್ನಾಟಕ, ಹರಿಯಾಣದಲ್ಲಿ H3N2ಗೆ ಇಬ್ಬರು ಬಲಿ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಮಾಡಿರುವ ಕೆಲಸಗಳು ಜನರನ್ನು ತಲುಪಿವೆ. ಜನರು ಬಿಜೆಪಿಗೆ ಸಕಾರಾತ್ಮಕವಾಗಿ ಯೋಚಿಸಲಿದ್ದಾರೆ. ಖಂಡಿತವಾಗಿಯೂ ನಮಗೆ ಜನಾಶೀರ್ವಾದ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಕೊಡುಗೆಗಳನ್ನು ಕೊಟ್ಟಿದೆ. ಪ್ರಧಾನಿ ನರೇಂದ್ರಮೋದಿ ಅವರು ರಾಜ್ಯಕ್ಕೆ ಬಂದಾಗ ಅವುಗಳನ್ನು ಉದ್ಘಾಟನೆ ಮಾಡುತ್ತಾರೆ. ಕೇವಲ ಚುನಾವಣೆಗೋಸ್ಕರ ಬರುತ್ತಾರೆ ಎಂದು ಟೀಕೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ದೇಶದಲ್ಲಿ ಕೊರೊನಾ ಮಹಾಮಾರಿಗೆ ಮತ್ತೆ ಮೂರು ಬಲಿ

ಪ್ರತಿ ಬಾರಿ ಮೋದಿಯವರು ಬಂದಾಗ ಹಲವಾರು ಯೊಜನೆಗಳಿಗೆ ಹಣ ಕೊಟ್ಟಿದ್ದಾರೆ ಅವುಗಳ ಕಾಮಗಾರಿ ಮಾಡಿ ಉದ್ಘಾಟನೆ ಮಾಡುತ್ತಿದ್ದೇವೆ. ಹೈವೆ ಸೇರಿದಂತೆ ಕಳೆದ ಐದು ವರ್ಷಗಳಲ್ಲಿ ಸಾಕಷ್ಟು ಯೊಜನೆಗಳಿಗೆ ಹಣ ಕೊಟ್ಟಿದ್ದಾರೆ. ಅವುಗಳ ಉದ್ಘಾಟನೆ ಮಾಡುತ್ತಿದ್ದೇವೆ. ಧಾರವಾಡ ಸರಸ್ವತಿ ನಗರ ಅಲ್ಲಿ ಐಐಟಿ ಉದ್ಘಾಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಬೇಲಿಕೆರೆ ಯೋಜನೆ ಸಾಗರಮಾಲಾ ಯೋಜನೆ ಅಡಿಯಲ್ಲಿ ತೆಗೆದುಕೊಂಡಿದ್ದೇವೆ. ಇನ್ನೆರಡು ಯೋಜನೆ ಪಿಪಿಪಿ ಮಾದರಿಯಲ್ಲಿ ತೆಗೆದುಕೊಳ್ಳುತ್ತೇವೆ. ಕಳಸಾ ಬಂಡೂರಿ ಅಂತಿಮ ಚರಣದಲ್ಲಿದ್ದೇವೆ. ಫಾರೆಸ್ಟ್ ಕ್ಲಿಯರನ್ಸ್ ಆಗಬೇಕಿದೆ. ಕಾಮಗಾರಿಗೆ ಟೆಂಡರ್ ಪ್ರಕ್ರಿಯೆಗೆ ಸಿದ್ದತೆ ನಡೆಸಿದ್ದೇವೆ ಎಂದು ಇದೇ ವೇಳೆ ತಿಳಿಸಿದರು.

ರುದ್ರಪ್ರಯಾಗ, ತೆಹ್ರಿಗಳಲ್ಲಿ ಹೆಚ್ಚು ಭೂ ಕುಸಿತ ಸಂಭವಿಸಲಿವೆಯಂತೆ

ಸುಮಲತಾ ನಮ್ಮ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ ಇಂದು ಅವರು ತಮ್ಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಪಕ್ಷಕ್ಕೆ ಹೋಗುವವರು, ಬರುವವರು ಇದ್ದೇ ಇರುತ್ತದೆ. ಟಿಕೆಟ್ ನೀಟುವ ವಿಚಾರದಲ್ಲಿ ಸಮೀಕ್ಷೆ ನಡೆಸಿ ಅಭಿಪ್ರಾಯ ಪಡೆಯುತ್ತೇವೆ ಎಂದು ಹೇಳಿದರು.

CM Bommai, upcoming, assembly, elections, back, power,

Articles You Might Like

Share This Article