ಶಾಸಕ ರೇಣುಕಾಚಾರ್ಯ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

Social Share

ದಾವಣಗೆರೆ,ನ.9-ಶಾಸಕ ಎಂ.ಪಿ.ರೇಣುಕಾಚಾರ್ಯ ಸೋದರ ಪುತ್ರನ ಸಾವು ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಹೊನ್ನಾಳಿಯ ರೇಣುಕಾಚಾರ್ಯ ಅವರ ನಿವಾಸಕ್ಕೆ ಆಗಮಿಸಿದ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರ್ ಸಾವಿನ ಪ್ರಕರಣವನ್ನು ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ. ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

ಇಂತಹ ಘಟನೆ ನಡೆಯುತ್ತದೆ ಎಂದು ಸ್ವತಃ ನಾನು ಕೂಡ ನಿರೀಕ್ಷೆ ಮಾಡಿರಲಿಲ್ಲ. ಚಂದ್ರಶೇಖರ್ ಅವರನ್ನು ರೇಣುಕಾಚಾರ್ಯ ಮಗನಂತೆ ನೋಡಿಕೊಳ್ಳುತ್ತಿದ್ದರು. ಈ ಘಟನೆಯಿಂದ ಅವರ ಕುಟುಂಬದವರು ಸಾಕಷ್ಟು ನೊಂದಿದ್ದಾರೆ ಎಂದರು.

ಸತೀಶ್ ಜಾರಕಿಹೊಳಿ ತಕ್ಷಣ ಕ್ಷಮೆ ಕೇಳಬೇಕು : ಬಿಎಸ್‌ವೈ

ಪ್ರಕರಣವನ್ನು ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಆಕಸ್ಮಿಕವಾಗಿ ಅಪಘಾತ ಸಂಭವಿಸಿದೆಯೇ ಇಲ್ಲವೇ ಯಾರಾದರೂ ಕೊಲೆ ಮಾಡಿದ್ದಾರೆ ಎಂಬುದರ ಕುರಿತು ತನಿಖೆ ಮಾಡಲಾಗುತ್ತದೆ. ನಮ್ಮ ಪೊಲೀಸರು ಇದನ್ನು ಭೇದಿಸಲು ಸಮರ್ಥರಾಗಿದ್ದಾರೆ ಎಂದು ತಿಳಿಸಿದರು.

ಮರಣೋತ್ತರ ಪರೀಕ್ಷೆ ಹಾಗೂ ಎಫ್‍ಎಸ್‍ಎಲ್ ವರದಿ ಬರಬೇಕು. ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ಮಾಡಿದ್ದಾರೆ. ವರದಿ ಬರುವ ಮುನ್ನವೇ ಏನನ್ನು ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಕ್ಷೇತ್ರದಲ್ಲಿ ರೇಣುಕಾಚಾರ್ಯ ಅವರ ಕೆಲಸಕಾರ್ಯಗಳನ್ನು ಚಂದ್ರಶೇಖರ್ ನೋಡಿಕೊಳ್ಳುತ್ತಿದ್ದರು. ರಾಜಕೀಯದಲ್ಲಿ ಬೆಳೆಯಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದರು. ಆದರೆ ವಿಯಾಟ ಬೇರೆಯಾಗಿತ್ತು. ಇದನ್ನು ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.

ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪ, 6 ಮಂದಿ ಸಾವು

ರೇಣುಕಾಚಾರ್ಯ ನನಗೆ ಸಹೋದರನಿದ್ದಂತೆ ಘಟನೆ ನಡೆದ ತಕ್ಷಣವೇ ನಾನು ದೂರವಾಣಿ ಕರೆ ಮಾಡಿ ಮಾಹಿತಿ ಪಡೆದಿದ್ದೆ, ಈಗಲೂ ಕೂಡ ಅವರ ದುಃಖದಲ್ಲಿ ಭಾಗಿಯಾಗಿದ್ದೇನೆ. ನಿಷ್ಪಕ್ಷಪಾತವಾದ ತನಿಖೆ ನಡೆಯುತ್ತದೆ. ಪೊಲೀಸರು ಈಗಾಗಲೇ ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದರು.

ನಡುರಸ್ತೆಯಲ್ಲೇ ಅತ್ತೆಯನ್ನು ಕೊಂದ ಅಳಿಯ

ಇದಕ್ಕೂ ಮುನ್ನ ದಾವಣಗೆರೆಯಿಂದ ಹೊನ್ನಾಳಿಯ ರೇಣುಕಾಚಾರ್ಯ ಅವರ ಮನೆಗೆ ಆಗಮಿಸಿದ ಸಿಎಂ, ಮೃತ ಚಂದ್ರಶೇಖರನ ತಂದೆತಾಯಿ ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು. ದಾವಣಗೆರೆ ಜಿಲ್ಲಾ ಎಸ್ಪಿ ಸಿ.ಬಿ.ರಿಷ್ಯಂತ್ ಅವರನ್ನು ರೇಣುಕಾಚಾರ್ಯ ಅವರ ನಿವಾಸಕ್ಕೆ ಕರೆಸಿಕೊಂಡು ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡರು.

Articles You Might Like

Share This Article