ಬೆಂಗಳೂರು,ಮಾ.4- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡನೆಗೂ ಮುನ್ನ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಭೈರತಿ ಬಸವರಾಜ್, ಶಾಸಕ ಜಿ.ಟಿ.ಪಾಟೀಲ ಸೇರಿದಂತೆ ಮತ್ತಿತರರ ಜೊತೆ ಆರ್‍ಟಿನಗರದಲ್ಲಿರುವ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಬಾಲಬ್ರುಹಿ ವಸತಿ ಗೃಹದ ಪಕ್ಕದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಅರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯದ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಮುಖ್ಯಮಂತ್ರಿಗಳು ಈ ಬಾರಿ ಉತ್ತಮ ಮಳೆ-ಬೆಳೆಯಾಗಲಿ ಎಂದು ಪ್ರಾರ್ಥಿಸಿದರು. ಈ ವೇಳೆ ಬಾಲಬ್ರುಹಿ ಅತಿಥಿ ಗೃಹದಲ್ಲಿದ್ದ ಪೌರಕಾರ್ಮಿಕರನ್ನು ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದರು.
