ಪ್ರತಿವರ್ಷ ಮತದಾರರ ಪಟ್ಟಿ ಪರಿಷ್ಕರಣೆ ಆಗುತ್ತೆ, ಕಾಂಗ್ರೆಸ್ ಆರೋಪದಲ್ಲಿ ಸತ್ಯಾಂಶವಿಲ್ಲ : ಸಿಎಂ

Social Share

ಮಂಗಳೂರು, ನ.19- ಪ್ರತಿ ವರ್ಷ ಹಾಗೂ ಚುನಾವಣಾ ಸಂದರ್ಭದಲ್ಲಿ ಮತದಾರರ ಪರಿಷ್ಕರಣೆ ಮಾಡಲಾಗುತ್ತದೆ. ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಅವರು ಇಂದು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಜೂನ್ ತಿಂಗಳಿನಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವುದು ಚುನಾವಣಾ ಆಯೋಗದ ಸಾಮಾನ್ಯ ಪ್ರಕ್ರಿಯೆ. ದಾಖಲೆಗಳಿಲ್ಲದೆ ನಮ್ಮ ಬಗ್ಗೆ ಆರೋಪ ಮಾಡುತ್ತಿರುವ ಕಾಂಗ್ರೆಸ್ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದರು.

ಕಾಂಗ್ರೆಸ್ ಮಾಡುತ್ತಿರುವ ಆರೋಪಗಳ ಬಗ್ಗೆ ನಾವು ತಲೆಯನ್ನೇ ಕೆಡಿಸಿಕೊಂಡಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದು ಚುನಾವಣಾ ಆಯೋಗದ ನಿರಂತರ ಪ್ರಕ್ರಿಯೆ. ಇದಕ್ಕೂ ನಮಗೂ ಏನು ಸಂಬಂಧ ಎಂದರು.

“ಮೋದಿಯಂತಹ ನಾಯಕನಿಲ್ಲದಿದ್ದರೆ ನಗರಕ್ಕೊಬ್ಬ ಅಫ್ತಾಬ್ ಹುಟ್ಟುತ್ತಾನೆ”

ವಿರೋಧ ಪಕ್ಷದವರು ನ್ಯಾಯಮೂರ್ತಿಗಳಿಂದ ತನಿಖೆಗೆ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಬಿಡಿಎ ವಿಚಾರದಲ್ಲಿ ನ್ಯಾಯಾಂಗ ತನಿಖೆಯಾದಾಗ ಅದರಿಂದ ಪಾರಾಗಲು ಅನುಕೂಲವಾಯಿತು. ಶೀಘ್ರವಾಗಿ ಅಪರಾಧದ ವಿರುದ್ಧ ಪೊಲೀಸ್ ಕೆಲಸ ಮಾಡುತ್ತದೆ. ಈಗಾಗಲೇ ಬಂಧನವೂ ಆಗಿದೆ. ತೀವ್ರಗತಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಆಗಲಿದೆ ಎಂದು ಇದೇ ವೇಳೆ ತಿಳಿಸಿದರು.

ಉತ್ಪಾದನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ತಯಾರಿ ನಡೆಸಲಾಗಿದೆ. ಈಗಾಗಲೇ ಮೂರು ನವೀಕರಿಸಬಹುದಾದ ಇಂಧನ ಕಂಪೆನಿಗಳೊಂದಿಗೆ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಪುತ್ರಿ

ಬಹಳ ವೇಗದಲ್ಲಿ ಕೆಲಸಗಳಾಗುತ್ತಿದ್ದು, ಮಾರ್ಚ್-ಏಪ್ರಿಲ್ ವೇಳೆಗೆ ಕೆಲಸ ಪ್ರಾರಂಭ ಮಾಡುವುದಾಗಿ 2-3 ಕಂಪನಿಗಳು ಹೇಳಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರಾವಳಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಖ್ಯ ಪಾತ್ರ ವಹಿಸಿದೆ. ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬರಲಿದೆ ಎಂದರು.

ಗಲ್ ದೇಶದಲ್ಲಿ ಮತ್ತು ಮಂಗಳೂರಿನಲ್ಲಿ ತಲೆ ಎತ್ತಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಕಡಲ ನೀರಿನಿಂದ ಅಮೋನಿಯಾ ತಯಾರು ಮಾಡುವ ಪ್ರಮುಖ ಘಟ್ಟ ಬರಲಿದೆ. ನವೀಕರಿಸಬಹುದಾದ ಇಂಧನ ಘಟಕ್ಕೆ ಅಗತ್ಯ ವಿರುವ ಇಂಧನವನ್ನೂ ನವೀಕರಿಸಬಹುದಾದ ಇಂಧನ ಮೂಲಗಳಾದ ಸೋಲಾರ್, ವಿಂಡ್‍ಮಿಲ್‍ಗಳಿಂದಲೇ ಪಡೆಯಲಾಗುವುದು. ಸಂಪೂರ್ಣವಾಗಿ ಹಸಿರು ಯೋಜನೆಯಾಗಲಿದೆ ಎಂದು ಅವರು ತಿಳಿಸಿದರು.

ನೇರ ಹಾಗೂ ಪರೋಕ್ಷವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಜನೆಯಾಗಿ ಈ ಭಾಗದ ಯುವಕರಿಗೆ ಅವಕಾಶಗಳ ಬಾಗಿಲು ತೆರೆಯಲಿದೆ ಎಂದರು.

ಹೆದ್ದಾರಿ ದುರಸ್ತಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿ ನಿರಂತರವಾಗಿ ಮಳೆ ಬಂದಿದ್ದರಿಂದ ತಡವಾಗಿದೆ. ಮುಂದಿನ ವಾರ ದೆಹಲಿಗೆ ತೆರಳಲಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಬೇಕಿದೆ. ಈ ವಾರದಲ್ಲಿ ಅದಕ್ಕೆ ಪೂರಕವಾಗಿ ಇಡೀ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಸಭೆ ಕರೆಯಲಾಗುವುದು ಎಂದು ತಿಳಿಸಿದರು.

ಉತ್ತರಾಖಾಂಡ್‍ : ಕಂದಕಕ್ಕೆ ಕಾರು ಉರುಳಿ ಬಿದ್ದು 12 ಸಾವು

ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ ಕೆಲಸಗಳಾದ ಸುರಂಗ ಮಾರ್ಗ, ವೈಟ್ ಟಾಪಿಂಗ್ ಮುಂತಾದ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಅಲ್ಪಾವ ಕಾಮಗಾರಿಯಲ್ಲಿ ರಸ್ತೆಯಲನ್ನು ಬಳಕೆಗೆ ಯೋಗ್ಯವಾಗಿಸುವುದು ಹಾಗೂ ದೀರ್ಘಾವ ಕಾಮಗಾರಿ ಗಳಲ್ಲಿ ಸುರಂಗ ಮಾರ್ಗ ನಿರ್ಮಾಣ ಕೈಗೊಳ್ಳಲಾಗುವುದು ಎಂದರು.

CM Bommai, voter, list, election, Congress,

Articles You Might Like

Share This Article