ಬಿಎಸ್‍ವೈ ಜತೆ ಭಿನ್ನಾಭಿಪ್ರಾಯ ಇಲ್ಲ : ಬೊಮ್ಮಾಯಿ

Social Share

ಕೊಪ್ಪಳ,ಡಿ.15- ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿರುಗೇಟು ನೀಡಿದ್ದಾರೆ. ಇಂದು ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್‍ಗೆ ಮನೆ, ಬಾಗಿಲು, ಕಿಟಕಿ ಏನೂ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.

ಭಿನ್ನಾಭಿಪ್ರಾಯ ಶುದ್ಧ ಸುಳ್ಳು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು.

ಬೊಮ್ಮಾಯಿ -ಬಿಎಸ್‍ವೈ ನಡುವೆ ಶೀತಲ ಸಮರ..!

ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು.

ಭಾರತದ ನಡೆಗೆ ನಡುಗಿ ಬಿಲ ಸೇರಿಕೊಂಡ ಉಗ್ರರು

ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

CM Bommai, Yeddyurappa, Karnataka BJP,

Articles You Might Like

Share This Article