ಮೀರಾಬಾಯಿ ಚಾನುಗೆ ಸಿಎಂ ಬಿಎಸ್‍ವೈ ಅಭಿನಂದನೆ

ಬೆಂಗಳೂರು,ಜು.24- ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಕೀರ್ತಿಯನ್ನು ಹೆಚ್ಚಿಸಿದ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ.

49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದ ಮೀರಾಬಾಯಿ ಚಾನು ಅವರಿಗೆ ಸಮಸ್ತ ಭಾರತೀಯರ ಪರವಾಗಿ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆಯಿಂದ ಆರಂಭವಾಗಿರುವ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಆರಂಭವಾಗಿದ್ದು, ಚಾನು ಅವರು ವೈಟ್ ಲಿಫ್ಟಿಂಗ್‍ನಲ್ಲಿ ಮೊದಲ ಬೆಳ್ಳಿ ಪದಕಕ್ಕೆ ಮುತ್ತಿಡುವ ಮೂಲಕ ಪದಕ ಬೇಟೆ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ.