ಯಡಿಯೂರಪ್ಪನವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ : ಮುರುಘಾ ಶರಣರು

Spread the love

ಚಿತ್ರದುರ್ಗ,ಜು.20- ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲಾ ವರ್ಗಗಳ ಜನರ ವಿಶ್ವಾಸಗಳಿಸಿದ್ದು, ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಇಂದಿಲ್ಲಿ ನುಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಬಿಎಸ್‍ವೈ ಅವರ ಆಡಳಿತಕ್ಕೆ ಕೇಂದ್ರ ಸರ್ಕಾರವೇ ಶ್ಲಾಘನೆ ವ್ಯಕ್ತಪಡಿಸಿದೆ. ಮುಖ್ಯಮಂತ್ರಿಯವರು ಈ ನಾಡು ಕಂಡ ಶ್ರೇಷ್ಠ ನಾಯಕ. ಜಾತಿಯಲ್ಲಿ ಲಿಂಗಾಯಿತರಾದರೂ ಎಲ್ಲಾ ವರ್ಗಗಳ ಜನರ ವಿಶ್ವಾಸಗಳಿಸಿ ಜನನಾಯಕರಾಗಿದ್ದಾರೆ ಎಂದರು.

ಯಡಿಯೂರಪ್ಪ ಅವರು ಕೊರೊನಾ ಸಂಕಷ್ಟದಲ್ಲಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸಿದ್ದಾರೆ. ಸಂಪೂರ್ಣವಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲಿ ಎಂದು ಹೇಳಿದರು. ಒಟ್ಟಾರೆ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಮುರುಘಾ ಶರಣರು ಯಡಿಯೂರಪ್ಪನವರ ಬೆಂಬಲಕ್ಕೆ ನಿಂತಿದ್ದಾರೆ.