Thursday, December 5, 2024
Homeರಾಜಕೀಯ | Politicsಬಿಜೆಪಿಗೆ ಸಿಎಂ ತಿರುಗೇಟು

ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು,ಜು.4- ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಸಿಬಿಐಗೆ ಕೊಡುವಂತಹ ಪ್ರಕರಣ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿ ಸಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾವು
ಹಲವು ಪ್ರಕರಣಗಳನ್ನು ಸಿಬಿಐಗೆ ಕೊಡುವಂತೆ ಒತ್ತಾಯಿಸಿದ್ದೆವು. ಆದರೆ ಯಾವ ಪ್ರಕರಣವನ್ನೂ ಬಿಜೆಪಿ ಸರ್ಕಾರ ಸಿಬಿಐಗೆ ಕೊಟ್ಟಿರಲಿಲ್ಲ ಎಂದು ತಿರುಗೇಟು ನೀಡಿದರು.

ನಾನು ಮುಖ್ಯಮಂತ್ರಿಯಾಗಿದ್ದ ಹಿಂದಿನ ಅವಧಿಯಲ್ಲಿ 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಈಗ ಪಟ್ಟು ಹಿಡಿದು ಒತ್ತಾಯ ಮಾಡುತ್ತಿರುವ ಬಿಜೆಪಿಯವರು ಹಿಂದೆ ಆಡಳಿತ ನಡೆಸಿದಾಗ ಯಾವ ಪ್ರಕರಣವನ್ನು ಸಿಬಿಐಗೆ ಕೊಡದೇ ಇದ್ದಿದ್ದೇಕೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿರುವುದಕ್ಕೆ ನಂತರ ಪ್ರತಿಕ್ರಿಯಿಸುವುದಾಗಿ ಹೇಳಿದರು.

RELATED ARTICLES

Latest News