ಮಾ.23 ರಂದು ‘ವಿವೇಕಾನಂದ ಯುವಶಕ್ತಿ ಸಂಘ’ ಯೋಜನೆಗೆ ಚಾಲನೆ

Social Share

ಬೆಂಗಳೂರು, ಮಾ.19- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಯೋಜನೆಗೆ ಮಾ.23 ರಂದು ಚಾಲನೆ ನೀಡಲಿದ್ದಾರೆ. ಈ ಕುರಿತು ಇಂದು ಮುಖ್ಯಮಂತ್ರಿಯವರು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಘಗಳ ರಚನೆಯ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಬಹಳ ವರ್ಷಗಳಿಂದ ಸಕ್ರಿಯವಾಗಿವೆ. ಆದರೆ ಯುವಕರಿಗಾಗಿ ಮೊದಲ ಬಾರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಇಂತಹ ಯೋಜನೆಯನ್ನು ರೂಪಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಚ್ಚಿನ ಆದ್ಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಜಂಟಿ ಬಾಧ್ಯತಾ ಗುಂಪುಗಳ ರಚನೆಯಾಗಿ, ಸುತ್ತು ನಿಧಿ ಹಂಚಿಕೆಯೊಂದಿಗೆ ನಿಮ್ಮ ಕೆಲಸ ಮುಗಿಯುವುದಿಲ್ಲ. ಈ ಗುಂಪುಗಳು ಯೋಜನೆಯನ್ನು ಗುರುತಿಸಿ, ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆದು, ತಮ್ಮ ಉದ್ದಿಮೆಯನ್ನು ಸ್ಥಾಪಿಸಿ, ಉತ್ಪಾದನೆ ಪ್ರಾರಂಭಿಸುವ ವರೆಗೂ ನೀವು ಅವರಿಗೆ ಮಾರ್ಗದರ್ಶನ ನೀಡಲು ಸೂಚಿಸಿದರು.

20 ವರ್ಷದಿಂದ ಮನೆಯಲ್ಲೇ ಬಂಧಿಯಾಗಿದ್ದ ಅಣ್ಣ-ತಂಗಿಯ ರಕ್ಷಣೆ

ಯೋಜನೆಗಳನ್ನು ಗುರುತಿಸಲು ನಿಯೋಜಿಸಿರುವ ಸಮಾಲೋಚಕರು, ಯುವಕರು ಕೈಗೊಳ್ಳುವ ಯೋಜನೆಗೆ ಅನುಗುಣವಾಗಿ, ಆಯಾ ಕ್ಷೇತ್ರದ ಪರಿಣತರಿಂದಲೇ ತರಬೇತಿ ನೀಡಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.

ಯುವಶಕ್ತಿ ಸಂಘಗಳಿಗೆ ಸಾಲ ನೀಡುವಾಗ, ಯೋಜನಾ ಮೊತ್ತ ಹೆಚ್ಚಾಗಿದ್ದು, ಅವು ಲಾಭದಾಯಕ ಯೋಜನೆಗಳಾದರೆ, ಬ್ಯಾಂಕುಗಳು ಸರ್ಕಾರ ನಿಗದಿಪಡಿಸಿದ 5 ಲಕ್ಷ ರೂ. ಮಿತಿಗಿಂತ ಹೆಚ್ಚಿನ ಮೊತ್ತದ ಸಾಲ ಮಂಜೂರು ಮಾಡಿ, ಯುವಕರನ್ನು ಬೆಂಬಲಿಸಬೇಕೆಂದು ಮುಖ್ಯಮಂತ್ರಿಗಳು ಬ್ಯಾಂಕರುಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಯುವ ಸಬಲೀಕರಣ, ಕ್ರೀಡೆ ಮತ್ತು ರೇಷ್ಮೆ ಸಚಿವ ನಾರಾಯಣ ಗೌಡ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್. ಪ್ರಸಾದ್, ಗ್ರಾಮೀಣಾಭಿವೃದ್ಧೀ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೌಶಲ್ಯಾಭಿವೃದ್ಧೀ ಇಲಾಖೆ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪಂಜಾಬ್‍ನಲ್ಲಿ ಇಂಟರ್ನೆಟ್‌ ಸ್ಥಗಿತ : ಅಮೃತಪಾಲ್ ಬಂಧನಕ್ಕೆ ಶೋಧ

ಯೋಜನೆ ಪ್ರಗತಿ ಬಗ್ಗೆ: ರಾಜ್ಯದಲ್ಲಿ ಒಟ್ಟು 5951 ಗ್ರಾಮ ಪಂಚಾಯತಿಗಳಿದ್ದು, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ, ಪ್ರತಿ ಗ್ರಾಮ ಪಂಚಾಯತಿಗೆ ಎರಡು ಜಂಟಿ ಬಾಧ್ಯತಾ ಗುಂಪುಗಳನ್ನು ರಚಿಸಲು ಆರ್ಥಿಕ ಇಲಾಖೆಯ ಸಹಮತಿಯನ್ವಯ ದಿನಾಂಕ: 08.03.2023ರಂದು ಆದೇಶ ಹೊರಡಿಸಲಾಗಿದೆ.

ಅದರನ್ವಯ ಮಾ.18ರ ಅಂತ್ಯಕ್ಕೆ ಒಟ್ಟು 6509 ಜಂಟಿ ಬಾಧ್ಯತಾ ಗುಂಪುಗಳು ರಚನೆಯಾಗಿರುತ್ತದೆ. ಉಳಿದಂತೆ 5393 ಜಂಟಿ ಬಾಧ್ಯತಾ ಗುಂಪುಗಳು ರಚನೆಯಾಗಬೇಕಾಗಿದೆ. ಈಗಾಗಲೇ 1754 ಜಂಟಿ ಭಾದ್ಯತಾ ಗುಂಪುಗಳಿಗೆ ತಲಾ 10,000 ರೂ.ಗಳಂತೆ ಒಟ್ಟು 1.75 ಕೋಟಿ ರೂ. ವೆಚ್ಚದಲ್ಲಿ ಸುತ್ತು ನಿಧಿಯನ್ನು ಪಾವತಿಸಲಾಗಿದೆ.

100 ಮಾದರಿ ಪ್ರಸ್ತಾವನೆಗಳನ್ನು ಬ್ಯಾಂಕ್‍ಗಳಿಗೆ ಸಲ್ಲಿಸಲಾಗಿದ್ದು, ಈ ಪೈಕಿ ಸುಮಾರು 551 ಯೋಜನೆಗಳನ್ನು ಬ್ಯಾಂಕುಗಳ ಅನುಮೋದನೆ ಮತ್ತು ಸಾಲ ಮಂಜೂರಾತಿಗಾಗಿ ಸಲ್ಲಿಸಲಾಗಿದೆ.

ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೋವಿಡ್

ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯ ಬ್ಯಾಂಕ್ ಲಿಂಕೇಜ್, ಖಾತೆ ತೆರೆಯುವಿಕೆ ಮತ್ತು ಬ್ಯಾಂಕ್ ಸಾಲಕ್ಕೆ ಸಂಬಂಸಿದ ಚಟುವಟಿಕೆಗಳನ್ನು ಕೈಗೊಳ್ಳಲು ಸಾಮಾನ್ಯ ಸರ್ವಿಸ್ ಸೆಂಟರ್, ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ಎನ್.ಎಲ್.ಎಂನಿಂದ ಹಾಗೂ ಬ್ಯಾಂಕರ್ಸ್‍ಗಳಿಂದ ಒಟ್ಟು 7300 ಬಿ.ಸಿ ಸಖಿಗಳ ಸೇವೆಯನ್ನು ಪಡೆಯಲಾಗುತ್ತಿದ್ದು, ಸದರಿಯವರಿಗೆ ರಾಷ್ಟ್ರೀಕೃತ ಬ್ಯಾಂಕ್‍ನಿಂದ 2000 ರೂ. ಹಾಗೂ ಸಹಕಾರಿ ಬ್ಯಾಂಕ್‍ಗಳಿಂದ 4000 ಪ್ರೋತ್ಸಾಹ ಧನ ನೀಡಲಾಗುತ್ತಿದೆ.

ನ್ಯಾಷನಲ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟ್ ಸ್ಕೀಮ್( ಎನ್‍ಸಿಜಿಟಿಸಿ) ಅಡಿಯಲ್ಲಿ ಸ್ವ-ಸಹಾಯ ಗುಂಪುಗಳ ಮಾದರಿಯಲ್ಲಿ ಜಂಟಿ ಬಾಧ್ಯತಾ ಗುಂಪುಗಳನ್ನು ಒಳಪಡಿಸಲು ಈಗಾಗಲೇ ಮುಖ್ಯಮಂತ್ರಿಯವರಿಂದ ಕೇಂದ್ರ ವಿತ್ತೀಯ ಸಚಿವರ ಮುಂದೆ ಫೆ.6ರಂದು ಪ್ರಸ್ತಾಪಿಸಲಾಗಿದೆ.

CMBommai, holds, meeting, ZP CEO, Swamy Vivekananda YuvaShakti, launch,

Articles You Might Like

Share This Article