ಬೆಂಗಳೂರು,ಫೆ.21-ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದ ಅವರು ಕೆಲಕಾಲ ರಹಸ್ಯಮಾತುಕತೆ ನಡೆಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇಬ್ರಾಹಿಂ ಅವರು ಕಾಂಗ್ರೆಸ್ ತೊರೆಯುವುದಾಗಿ ಹೇಳಿಕೆ ನೀಡಿದ ನಂತರ ನಡೆದ ವಿದ್ಯಾಮನಾಗಲ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೆ ಇಬ್ರಾಹಿಂ ಜೆಡಿಎಸ್ಗೆ ಮರಳುವುದಾದರೆ ಮುಕ್ತ ಅವಕಾಶವಿದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ಭೇಟಿಯಾಗಿರುವ ಉಭಯ ನಾಯಕರು ಜೆಡಿಎಸ್ ಸೇರ್ಪಡೆ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
