ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲು ಸಿಎಂ ಸೂಚನೆ

ಬೆಂಗಳೂರು,ಜು.9- ರಾಜ್ಯದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಅನೇಕ ರಾಜ್ಯ ಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ ಎಂದರು. ಸ್ಥಳೀಯರೊಂದಿಗೆ ಸೇರಿಕೊಂಡು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಪ್ರವಾಸೋದ್ಯಮ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ … Continue reading ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲು ಸಿಎಂ ಸೂಚನೆ