ಕಾನೂನು ಉಲ್ಲಂಘಿಸಿದವರು ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿನಡಿಯೇ ಕ್ರಮ ಕೈಗೊಳ್ಳುತ್ತೇವೆ : ಸಿಎಂ

Social Share

ಬೆಂಗಳೂರು,ಜ.10- ಕಾನೂನು ಉಲ್ಲಂಘಿಸಿದವರು ಎಷ್ಟೇ ದೊಡ್ಡವರಿದ್ದರೂ ಅವರ ಮೇಲೆ ಕಾನೂನಿನ ಪ್ರಕಾರವೇ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ದೊಡ್ಡವರಿಗೊಂದು, ಜನಸಾಮಾನ್ಯರಿಗೊಂದು ನಿಯಮ ಮಾಡಿಲ್ಲ. ಉಲ್ಲಂಘನೆ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ಮೇಲೆ ನಿಶ್ಚಿತವಾಗಿಯೂ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಅವರು ಯಾವ ಸೆಕ್ಷನ್‍ನಡಿ ದೂರು ದಾಖಲಿಸುತ್ತಾರೋ ನಂತರವೇ ಮುಂದಿನ ಕಾನೂನು ಕ್ರಮಗಳು ಜರುಗಲಿವೆ ಎಂದು ತಿಳಿಸಿದರು.
ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರನ್ನು ಬಂಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಯಾರನ್ನೇ ಬಂಸಬೇಕಾದರೂ ಮೊದಲು ದೂರು ದಾಖಲಾಗಬೇಕು. ನಂತರ ಎಫ್‍ಐಆರ್ ದಾಖಲಾಗುತ್ತದೆ. ಪೊಲೀಸರು ಯಾವ ಸೆಕ್ಷನ್‍ನಡಿ ದೂರು ದಾಖಲಿಸಿಕೊಂಡಿದ್ದಾರೋ ನಂತರದ ಬೆಳವಣಿಗೆಗಳು ನಡೆಯುತ್ತವೆ ಎನ್ನುವ ಮೂಲಕ ಕಾಂಗ್ರೆಸ್ ನಾಯಕರಿಗೆ ಕಾನೂನು ಕ್ರಮ ಖಚಿತ ಎಂಬ ಸಂದೇಶವನ್ನು ರವಾನಿಸಿದರು.
ನಾವು ಪಾದಯಾತ್ರೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿಲ್ಲ. ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಇದು ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬಬಾರದು ಎಂಬ ಕಾರಣಕ್ಕಾಗಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ನಿನ್ನೆ ಕರ್ನಾಟಕದಲ್ಲಿ 12 ಸಾವಿರ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿವೆ. ರಾಜಧಾನಿ ಬೆಂಗಳೂರಿನಲ್ಲೇ 8 ಸಾವಿರಕ್ಕೂ ಅಕ ಪ್ರಕರಣಗಳು ದಾಖಲಾಗಿವೆ. ನಮಗೆ ಜನರ ಆರೋಗ್ಯದ ಜೊತೆಗೆ ಜೀವನವೂ ಮುಖ್ಯ ಎಂದು ಹೇಳಿದರು.
ಪಾದಯಾತ್ರೆಯಲ್ಲಿ ಪಾಲ್ಗೊಂಡವರು ಇಲ್ಲವೇ ಸಂಘಟಿತರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂಬ ಪ್ರಶ್ನೆಗೆ ಈಗಾಗಲೇ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುದಕೊಂಡಿದ್ದಾರೆ. ಕಾನೂನಿನ ಪ್ರಕಾರ ಇವೆಲ್ಲವೂ ನಡೆಯುತ್ತದೆ ಎಂದು ವಿವರಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೋವಿಡ್ ಟೆಸ್ಟ್ ನಡೆಸಲು ಹೋಗಿದ್ದರು. ನಮಗೂ ಕೂಡ ಅವರ ಆರೋಗ್ಯದ ಬಗ್ಗೆ ಕಾಳಜಿ ಇದೆ. ಅವರು ನಡೆದುಕೊಂಡ ರೀತಿ ಸರಿಯಲ್ಲ. ಇದು ಅವರ ಸಂಸ್ಕøತಿಯನ್ನು ತೋರಿಸುತ್ತದೆ ಎಂದು ಅಸಮಾಧಾನ ತೋರಿಸಿದರು.
ಸಂಕ್ರಾಂತಿ ನಂತರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಮಾರ್ಗಸೂಚಿಗಳಿಗೆ ರಿಯಾಯ್ತಿ ನೀಡುವ ಚಿಂತನೆ ಪ್ರಾರಂಭದಲ್ಲಿತ್ತು. ಆದರೆ ಬೆಂಗಳೂರಿನಲ್ಲಿ ಕೋವಿಡ್ ಪಾಸಿವಿಟಿ ದರ 6.8ರಷ್ಟಿದೆ. ಮುಂದಿನ ದಿನಗಳಲ್ಲಿ ಇದು ಜಿಲ್ಲೆಗೂ ಹರಡಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಅನಾರೋಗ್ಯದಿಂದ ಇಂದು ನಿಧನರಾದ ಸಾಹಿತಿ ಚಂಪಾ ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಾಧರಗಳಿಂದೊಂದಿಗೆ ನಡೆಸಲಾಗುವುದು. ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಬಹಳ ಖುಷಿಪಟ್ಟಿದ್ದರು. ನಮ್ಮ ತಂದೆಗೂ ಅವರು ಅತ್ಯಂತ ಆತ್ಮೀಯರಾಗಿದ್ದರು. ಅವರ ನಿಧನ ಕನ್ನಡ ಸಾರಸತ್ವ ಲೋಕಕ್ಕೆ ತುಂಬಲಾರದ ನಷ್ಟ ಎಂದು ಇದೇ ಸಂದರ್ಭದಲ್ಲಿ ನುಡಿದರು.

Articles You Might Like

Share This Article