ಹುಬ್ಬಳ್ಳಿ,ಫೆ.26- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳಿನ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಅವರು ಹೇಳಿರುವ ಸುಳ್ಳು ಒಂದೊಂದಾಗಿ ಹೊರಬರುತ್ತಿದೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳ ಕುರಿತು ವಿಧಾನಸಭೆ ಅವೇಶನದಲ್ಲಿಯೇ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೆ ಅದು ಸತ್ಯವಾಗುತ್ತದೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಸತ್ಯ ಸತ್ಯವೇ, ಸುಳ್ಳು ಸುಳ್ಳೇ. ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗುವುದಿಲ್ಲ. ಸತ್ಯ ಸುಳ್ಳಾಗುವುದಿಲ್ಲ ಎಂದರು. ಕೃಷಿ, ನೀರಾವರಿ, ಸಾಮಾಜಿಕ ವಲಯದಲ್ಲಿ ಹಲವು ಕಾರ್ಯಕ್ರಮ ಅನುಷ್ಠಾನವಾಗಿವೆ. ಎಲ್ಲಾ ವರ್ಗಗಳ ಶ್ರೇಯಾಭಿವೃದ್ದಿಗೆ ಕೆಲಸ ಮಾಡಲಾಗುತ್ತಿದೆ. ವಿರೋಧ ಪಕ್ಷಗಳು ಇದನ್ನು ಸಹಿಸದೆ ನಾನಾ ರೀತಿತಲ್ಲಿ ಆರೋಪ ಮಾಡುತ್ತಿದೆ. ಆದರೆ ಕರ್ನಾಟಕದ ಜನರು ಪ್ರಬುದ್ಧರಾಗಿದ್ದಾರೆ.
ಟೀಕೆಗಳಿಗೆ ಸೊಪ್ಪು ಹಾಕಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಜನರ ಬಳ ಹೋಗುತ್ತೇವೆ. ಜನರು ನಾವು ಮಾಡಿದ ಕೆಲಸಗಳಿಗೆ ಬೆಂಬಲ ಕೊಡುತ್ತಾರೆ. ಕರ್ನಾಟಕದ ಜನರು ಕಾಂಗ್ರೆಸ್ ನಾಯಕರುನ್ನು ಪರೀಕ್ಷೆ ಮಾಡಿ ಕೈಬಿಟ್ಟಿದ್ದಾರೆ. ಅವರ ಆಡಳಿತದಲ್ಲಿ ನಡೆದದ್ದನ್ನು ಜನರು ಮರೆತಿಲ್ಲ. ಅವರು ಮತ್ತೆ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದರು.
ಅಧಿಕಾರಕ್ಕೆ ಬರದ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ ಎಂದು ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಪೈಪೋಟಿಗೆ ಪ್ರತಿಕ್ರಿಯೆ ನೀಡಿದರು.
ಬಿಎಸ್ವೈ ಮಠಾೀಶರನ್ನು ಚುನಾವಣಾ ಅಖಾಡಕ್ಕೆ ಇಳಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದುವರೆಗೂ ಯಾವುದೇ ಮಠಾೀಶರು ನನ್ನನ್ನು ಸಂಪರ್ಕಿಸಿಲ್ಲ, ಚರ್ಚಿಸಿಲ್ಲ. ಮಠಾಧೀಶರು ಚುನಾವಣೆಗೆ ಇಳಿಯುತ್ತಾರೆ ಎನ್ನುವ ಬಗ್ಗೆ ಏನೂ ಹೇಳಲು ಆಗುವುದಿಲ್ಲ ಎಂದರು.
ಬಳಿಕ ಸಿದ್ದರಾಮಯ್ಯ ಅರ್ಕಾವತಿ ಹಗರಣ ಸಿಬಿಐ ತನಿಖೆಗೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಸಿಬಿಐ ತನಿಖೆ ಬಗ್ಗೆ ಯಾರು ಹೇಳಿದ್ದು? ಎಂದು ಪ್ರಶ್ನಿಸಿ, ಅರ್ಕಾವತಿ ಹಗರಣದ ಬಗ್ಗೆ ಕಮೀಷನ್ ವರದಿ ಕೊಟ್ಟಿದೆ. ಮುಂದೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ. ನಾವು ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಸೋನಿಯಾ ಗಾಂ ರಾಜಕೀಯ ನಿವೃತ್ತಿ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಅದು ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು. ನಂತರ 7 ವೇತನ ಆಯೋಗ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಈಗಾಗಲೇ ಅವರ ಜೊತೆ ಚರ್ಚಿಸಿದ್ದೇನೆ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದರು.
ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯನ್ನು ಅವರು ಮತ್ತಷ್ಟು ಬಲಪಡಿಸುತ್ತಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಪ್ರತಿ ಬಾರಿ ಬಂದಾಗ ಸಾವಿರಾರು ಕೋಟಿ ಅಭಿವೃದ್ದಿ ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಶಿವಮೊಗ್ಗದ ವಿಮಾನ ನಿಲ್ದಾಣ ನಮ್ಮ ಕಾಲದಲ್ಲಿ ಪೂರ್ಣ ಆಗಿದ್ದು. ಅದು ಅಭಿವೃದ್ದಿ ಅಲ್ವಾ? ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿ ರಾಜ್ಯಕ್ಕೆ ಪ್ರತಿ ಭಾರಿ ನಾವು ಮಾಡಿರುವ ಕೆಲಸದ ಉದ್ಘಾಟನೆಗೆ ಬಂದಿದ್ದಾರೆ. ಬಜೆಟ್ನಲ್ಲೂ ಕೇಂದ್ರದಿಂದ ಹೆಚ್ಚಿನ ಅನುದಾನ ಬಂದಿದೆ ಎಂದ ಅವರು ಸೋನಿಯಾ ಗಾಂ ಪರೋಕ್ಷ ವಿಶ್ರಾಂತಿ ಘೋಷಣೆಗೆ ಅದು ಅವರ ಪಕ್ಷದ ಅಂತರಿಕ ವಿಚಾರ ಎಂದರು.
#CMBommai, #Siddaramaiah, #Congress,