Friday, November 22, 2024
Homeರಾಜ್ಯಬೆಂಗಳೂರಲ್ಲಿ ನಿಯಮಬಾಹಿರ ಕಟ್ಟಡಗಳ ವಿರುದ್ಧ ಕ್ರಮಕ್ಕೆ ಸಿಎಂ ಕಟ್ಟಪ್ಪಣೆ

ಬೆಂಗಳೂರಲ್ಲಿ ನಿಯಮಬಾಹಿರ ಕಟ್ಟಡಗಳ ವಿರುದ್ಧ ಕ್ರಮಕ್ಕೆ ಸಿಎಂ ಕಟ್ಟಪ್ಪಣೆ

CM orders action against illegal buildings in Bangalore

ಬೆಂಗಳೂರು,ಅ.24- ನಗರದಲ್ಲಿ ನಿಯಮಬಾಹಿರವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಪ್ಪಣೆ ಮಾಡಿದ್ದಾರೆ.

ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಗಳು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್‌ ಅವರಿಗೆ ಅನಧಿಕೃತ ಕಟ್ಟಡಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದರು.

ಈ ನಿಟ್ಟಿನಲ್ಲಿ ವಿಭಾಗೀಯ ಅಧಿಕಾರಿಗೂ ನೋಟಿಸ್‌‍ ನೀಡಿ ಕ್ರಮ ಕೈಗೊಳ್ಳಬೇಕು. ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್‌‍ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್‌ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಿಎಂ ಆಗ್ರಹಿಸಿದರು.

ಸಚಿವ ಬೈರತಿ ಸುರೇಶ್‌, ಎಂ.ಸಿ.ಸುಧಾಕರ್‌, ಶಾಸಕ ಬೈರತಿ ಬಸವರಾಜ್‌ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಘಟನಾ ಸ್ಥಳ ಪರಿಶೀಲನೆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

RELATED ARTICLES

Latest News