Monday, December 2, 2024
Homeರಾಜ್ಯಸಿಎಂ ಪರಿಹಾರ ನಿಧಿ ಸಿಗದೆ ಬಡವರಿಗೆ ಅನ್ಯಾಯ

ಸಿಎಂ ಪರಿಹಾರ ನಿಧಿ ಸಿಗದೆ ಬಡವರಿಗೆ ಅನ್ಯಾಯ

CM relief fund rejected for poor silly reasons

ಬೆಂಗಳೂರು,ನ.19-ಬಡವರು ವೈದ್ಯಕೀಯ ನೆರವು ಕೋರಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದ ಅರ್ಜಿಯನ್ನು ಕ್ಷುಲಕ ಕಾರಣಗಳನ್ನು ನೀಡಿ ತಿರಸ್ಕರಿಸಿ, ಬಡ ಜನರಿಗೆ ವೈದ್ಯಕೀಯ ನರವಿನಿಂದ ವಂಚನೆ ಮಾಡುತ್ತಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಮಲೆನಾಡು ಕರಾವಳಿ ಒಕ್ಕೂಟ ರಾಜ್ಯ ಪ್ರಧಾನ ಸಂಚಾಲಕ ಅನಿಲ್‌ ಹೊಸಕೊಪ್ಪ ಹೇಳಿದ್ದಾರೆ.

ನಮ್ಮ ಮಲೆನಾಡು-ಕರಾವಳಿ ಹಾಗೂ ಇತರೆ ಭಾಗದ ಬಡ ಜನರು ಸಿಎಂ ಪರಿಹಾರ ನಿಧಿಗೆ ವೈದ್ಯಕೀಯ ನೆರವು ಕೋರಿ ಅರ್ಜಿ ಸಲ್ಲಿಸುತ್ತಿದ್ದು, ಬಹುತೇಕ ಅರ್ಜಿಗಳು ತಿರಸ್ಕೃತವಾಗುತ್ತಿದ್ದು, ನಿಜವಾಗಿಯೂ ಬಡವರಿಗೆ ಸಲ್ಲಬೇಕಾದ ಸಹಾಯ ತಲುಪುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಳ್ಳಿಗಾಡು ಪ್ರದೇಶಗಳಲ್ಲಿ, ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಸಮಸ್ಯೆಯಾದಾಗ ಜನ ಸ್ಥಳೀಯ ಆಸ್ಪತ್ರೆಗೆ ಹೋಗುತ್ತಾರೆ ಆದರೆ ಅಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ದೊಡ್ಡ ಆಸ್ಪತ್ರೆಗಳಿಗೆ ಹೋಗಿ ಬೇರೆ ಕಡೆ ತೋರಿಸಿ ಎನ್ನುತ್ತಾರೆ.ಅಲ್ಲೇ ಸುನಾರು 5 ಸಾವಿರದಿಂದ 10 ಸಾವಿರದವರೆಗೆ ಬಿಲ್‌ ಆಗಿರುತ್ತದೆ. ಆಯುಷ್‌ಮಾನ್‌ ಅಥವಾ ಬೇರೆ ಬಿ.ಪಿ.ಎಲ್‌ ಕಾರ್ಡ್‌ಳ ಮೂಲಕ ಸ್ವಲ್ಪ ಹಣ ಜಮಾ ಆಗಿರುತ್ತದೆ.

ಅದರಲ್ಲೂ ಮಲೆನಾಡು ಕರಾವಳಿ ಭಾಗದ ಜನ ನಗರ ಪ್ರದೇಶದ ದೊಡ್ಡ ದೊಡ್ಡ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಅಥವಾ ಶಸ್ತ ಚಿಕಿತ್ಸೆ ಮಾಡಿಸಿಕೊಂಡು ಅಲ್ಲಿ 15 ರಿಂದ 20 ದಿನಗಳವರೆಗೆ ಆಸ್ಪತ್ರೆಗಳಲ್ಲಿ ಇದ್ದು ಸಂಪೂರ್ಣ ಹಣ ಕಟ್ಟಿ ನಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಜಿ ಕೊಟ್ಟರೆ ಈಗಾಗಲೇ ನಿಮಗೆ ಆಯುಷ್ಮಾನ್‌ ಅಥವಾ ಬಿ.ಪಿ.ಎಲ್‌ ಸೌಲಭ್ಯದಿಂದ 5 ಸಾವಿರ ಡ್ರಾ ಆಗಿದೆ ಹಾಗಾಗಿ ಈ ಬಿಲ್‌ ಕೊಡಲು ಬರುವುದಿಲ್ಲ ಎಂದು ತಿರಸ್ಕರಿಸುತ್ತಾರೆ ಅಮಾಯಕ ಜನರಿಗೆ ಯಾವ ರೀತಿ ವೈದ್ಯಕೀಯ ನೆರವು ಪಡೆಯುವ ಅರ್ಜಿಗಳನ್ನು ಸಲ್ಲಿಸಬೇಕೆಂಬ ಮಾಹಿತಿ ಇರುವುದಿಲ್ಲ. ಎಷ್ಟೋ ಹಣ ಬಂದರೆ ಸಾಕು ಎಂದು ತಿಳಿದು ಅರ್ಜಿ ಸಲ್ಲಿಸುತ್ತಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಲಕ್ಷಗಟ್ಟಲೆ ವೆಚ್ಚವಾಗಿರುತ್ತದೆ. ಆದರೆ ಮೊದಲು ಸೇರಿದ ಆಸ್ಪತ್ರೆಯಲ್ಲಿ ಪರಿಹಾರ ಪಡೆದ ಐದೋ ಅಥವಾ ಹತ್ತು ಸಾವಿರಗಳಿಂದ ಹೆಚ್ಚಿನ ಪರಿಹಾರ ಪಡೆಯಲು ಅಮಾಯಕ ಗ್ರಾಮೀಣ ಜನ ವಂಚಿತರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಒಂದು ರೂಪಾಯಿನಷ್ಟೂ ಪರಿಹಾರ ಪಡೆದಿದ್ದರೂ ಸಹ ಒಂದು ಲಕ್ಷದಷ್ಟು ಪರಿಹಾರದ ಬಿಲ್‌ ಅನ್ನು ತಿರಸ್ಕರಿಸಲಾಗುತ್ತದೆ. ಇದರಿಂದ ಬಡ,ಅಮಾಯಕ ಜನರಿಗೆ ನಿರಂತರ ಅನ್ಯಾಯವಾಗುತ್ತಿದೆ. ಸಣ್ಣ ಸಣ್ಣ ಕಾರಣಗಳನ್ನು ಮುಂದಿಟ್ಟು ಬಡ ಜನರ ಅರ್ಜಿಗಳನ್ನು ತಿರಸ್ಕರಿಸಿದರೆ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲವೇನೋ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಬರಿದಾಗಿದೆ ಎಂಬ ಭಾವನೆ ಮೂಡುತ್ತದೆ ಎಂದು ದೂರಿದ್ದಾರೆ.

ಹಾಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 2 ಲಕ್ಷ ಬಿಲ್‌ಗೆ ಎಷ್ಟು ಬರುತ್ತೋ ಅದರಲ್ಲಿ ಮೊದಲ ಆಸ್ಪತ್ರೆಗಳಲ್ಲಿ ನೀಡಿದ ಕಡಿಮೆ ಮೊತ್ತವನ್ನು ಅಂದರೆ 5 ಸಾವಿರ ಕಡಿತಗೊಳಿಸಿಕೊಂಡು ಉಳಿದ ಹಣ ಬಿಡುಗಡೆ ಮಾಡಿ ಬಡವರಿಗೆ ಹೆಚ್ಚಿನ ಪರಿಹಾರ ನೀಡುವ ಮೂಲಕ ಸಹಾಯ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.

RELATED ARTICLES

Latest News