Friday, June 14, 2024
Homeರಾಜಕೀಯವಾಲೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಹೊಣೆ ಸಿಎಂ ಸಿದ್ದರಾಮಯ್ಯನವರೇ ಹೊರಬೇಕು : HDK

ವಾಲೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಹೊಣೆ ಸಿಎಂ ಸಿದ್ದರಾಮಯ್ಯನವರೇ ಹೊರಬೇಕು : HDK

ಬೆಂಗಳೂರು, ಜೂ.3- ವಾಲೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಆರೋಪವನ್ನು ಸಚಿವ ನಾಗೇಂದ್ರ ಅವರ ಮೇಲೆ ಹೊರಿಸುವುದಕ್ಕಿಂತ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ವಿಧಾನಪರಿಷತ್‌ ಚುನಾವಣೆಗೆ ಜೆಡಿಎಸ್‌‍ ಅಭ್ಯರ್ಥಿ ಟಿ.ಎನ್‌.ಜವರಾಯಿಗೌಡ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಆರೋಪದ ಹೊಣೆಯನ್ನು ಮುಖ್ಯಮಂತ್ರಿ ಹೊರಬೇಕು. ಈ ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ತರಾತುರಿಯಲ್ಲಿ ಎಸ್‌‍ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಿದರು.

ವಾಲೀಕಿ ಅಭಿವೃದ್ಧಿ ನಿಗಮದಂತೆ ಹಲವು ನಿಗಮಮಂಡಳಿಗಳಲ್ಲೂ ಅವ್ಯವಹಾರ ಆಗಿರುವ ಶಂಕೆ ಇದೆ. ಕೇವಲ ಸಚಿವ ನಾಗೇಂದ್ರ ಅವರ ಮಟ್ಟದಲ್ಲಿ ಇದು ನಡೆದಿಲ್ಲ. ತೆಲಂಗಾಣಕ್ಕೆ ಹಣ ವರ್ಗಾವಣೆಯಾಗಿದೆ. 14 ಖಾತೆಗಳನ್ನು ತೆರೆದಿದ್ದಾರೆ. ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಹಣವನ್ನು ವರ್ಗಾವಣೆ ಮಾಡಲಾಗಿದೆ. ಈ ವಿಚಾರದಲ್ಲಿ ಆಮೆ ವೇಗದಲ್ಲಿ ತನಿಖಾ ಕ್ರಮವಾಗುತ್ತಿದೆ. ಹಣ ವರ್ಗಾವಣೆ ಮಾಡುವಂತೆ ನಿಗಮದಲ್ಲಿ ಆಡಳಿತ ಮಂಡಳಿ ಸಭೆ ನಡೆಸಿ ತೀರ್ಮಾನ ಮಾಡಿಲ್ಲ, ಸ್ವೇಚ್ಛಾಚಾರವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ತೆಲಂಗಾಣ ಚುನಾವಣೆಗೆ ಹಣಬಳಕೆ ಮಾಡಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದು ಒಂದು ವಾರ ಕಳೆದಿದೆ. ಯಾವ ತನಿಖೆ ನಡೆಸುತ್ತಿದ್ದಾರೆ. ಇವರಿಗೆ ನಾಚಿಕೆಯಾಗಬೇಕು. ಈ ಪ್ರಕರಣವನ್ನು ಇನ್ನೊಬ್ಬರ ತಲೆಗೆ ಕಟ್ಟಲು ಹೋಗುತ್ತಿದ್ದಾರೆ. ರಾಜ್ಯದ ಜನತೆ ಬಗ್ಗೆ ಗೌರವವಿದ್ದರೆ ಮುಖ್ಯಮಂತ್ರಿ ಇದರ ಹೊಣೆಯನ್ನು ಹೊರಬೇಕು. ಇದು ಸರ್ಕಾರದ ಜವಾಬ್ದಾರಿ ಎಂದು ಆಗ್ರಹಿಸಿದರು.

ತೆಲಂಗಾಣದ ಚುನಾವಣೆ ಉಸ್ತುವಾರಿ ಜವಾಬ್ದಾರಿಯನ್ನು ಯಾರ್ಯಾರು ವಹಿಸಿಕೊಂಡಿದ್ದರು. ಕಾಂಗ್ರೆಸ್‌‍ ಪಕ್ಷದ ಹೈಕಮಾಂಡ್‌ನ ಮೂಗಿನ ನೇರಕ್ಕೆ ಈ ವ್ಯವಹಾರ ನಡೆದಿದೆ. ಸಚಿವರ ಮೌಖಿಕ ಆದೇಶದ ಮೇರೆಗೆ ಹಣ ವರ್ಗಾವಣೆ ಎಂಬುದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ. ಈ ಪ್ರಕರಣದಲ್ಲಿ ಯೂನಿಯನ್‌ ಬ್ಯಾಂಕ್‌ ಭಾಗಿಯಾಗಿರುವುದರಿಂದ ಸಿಬಿಐ ತನಿಖೆ ಆಗಲಿದೆ ಎಂದರು.

ಸಚಿವ ಪ್ರಿಯಾಂಕ್‌ ಖರ್ಗೆಯವರು ಪ್ರತಿಯೊಂದಕ್ಕೂ ಪ್ರತಿಕ್ರಿಯೆ ನೀಡುತ್ತಾರೆ. ಅವರ ಇಲಾಖೆಗೆ ಸಂಬಂಧಿಸಿದ ಎಆರ್‌ಡಿಎಲ್‌ ಗುತ್ತಿಗೆದಾರರೊಬ್ಬರು ಆತಹತ್ಯೆ ಮಾಡಿಕೊಂಡಿಲ್ಲವೇ? ಎಂದು ಪ್ರಶ್ನಿಸಿದರು.

ನಗರ ಪ್ರದಕ್ಷಿಣೆ ಪ್ರಯೋಜನವೇನು ? :
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಳೆ ಅನಾಹುತ ತಡೆಯುವ ಬಗ್ಗೆ ನಗರ ಪ್ರದಕ್ಷಿಣೆ ಮಾಡಿದ್ದಾರೆ. ಏನು ಪ್ರಯೋಜನವಾಗಿದೆ? ಏನು ಕ್ರಮ ಕೈಗೊಂಡಿದ್ದಾರೆ? ಕಳೆದ ವರ್ಷವೂ ನಗರ ಪ್ರದಕ್ಷಿಣೆ ಮಾಡಿದ್ದರು, ಕಳೆದ ವಾರ ಕೂಡ ಮಾಡಿದ್ದರು, ಆದರೂ ಮಳೆ ಬಂದಾಗ ಅನಾಹುತ ಸಾಮಾನ್ಯವಾಗಿದೆ. ಜನರು ರಾತ್ರಿಯೆಲ್ಲಾ ಜಾಗರಣೆ ಮಾಡುವಂತಾಗಿದೆ.

ಯಾವುದಾದರೂ ಒಂದು ಭಾಗದಲ್ಲಿ ಸರಿಪಡಿಸಿದ್ದರೆ ಹೇಳಲಿ. ನಾನು ಮುಖ್ಯಮಂತ್ರಿಯಾಗಿದ್ದಾಗ ಗುಟ್ಟೇನಹಳ್ಳಿ ಕೆರೆ ಸಮಸ್ಯೆ ಉಂಟಾಗಿತ್ತು. ಅದಕ್ಕೆ ಶಾಶ್ವತ ಪರಿಹಾರವನ್ನು ಕಲ್ಪಿಸಲಾಗಿದೆ ಎಂದು ಸಮರ್ಥಿಸಿಕೊಂಡರು.

ದೇವರ ಬಗ್ಗೆ ಚೆಲ್ಲಾಟವಾಡಬಾರದು :
ಶರಣರಷ್ಟೇ ಅಲ್ಲ ದೇವರೊಂದಿಗೆ ಚೆಲ್ಲಾಟವಾಡಬಾರದು, ದೇವರೇ ಅಂತಿಮ ತೀರ್ಮಾನ ಕೈಗೊಂಡು ಶಿಕ್ಷೆ ಕೊಡುತ್ತಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿದ್ದ ಶತ್ರು ಸಂಹಾರ ಭೈರವಿ ಯಾಗ ಕುರಿತ ಹೇಳಿಕೆಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ಶರಣರ ವಚನ, ದಾಸರ ವಾಣಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಕೇರಳ ಸರ್ಕಾರ ಅವರ ಹೇಳಿಕೆಯನ್ನು ಅಲ್ಲಗಳೆದಿದೆ. ಕೇರಳದಲ್ಲಿ ಶತ್ರು ಸಂಹಾರಕ್ಕಾಗಿ ಕೋಣ, ಮೇಕೆ, ಹಂದಿ ಮೊದಲಾದ ಪ್ರಾಣಿಗಳನ್ನು ಬಲಿ ಕೊಡುತ್ತಿದ್ದಾರೆಂದು ಆರೋಪಿಸಿದ್ದರು. ರಾಜರಾಜೇಶ್ವರಿ ದೇವಾಲಯಕ್ಕೆ ನಾನೂ ಹೋಗಿದ್ದೇನೆ.

ಅಲ್ಲಿನ ಪೂಜಾ ವಿಧಿವಿಧಾನಗಳು ಗೊತ್ತಿಲ್ಲವೇ? ಕಳೆದ ಒಂದೂವರೆ ತಿಂಗಳಿನಿಂದ ನಡೆಸುತ್ತಿರುವ ಪೆನ್‌ಡ್ರೈವ್‌ನ ಮುಂದುವರೆದ ಭಾಗ ಅಷ್ಟೇ. ಪದೇಪದೇ ನಮ ಕುಟುಂಬವನ್ನು ಅವರು ನೆನಪಿಸಿಕೊಳ್ಳುವುದರಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕಾಯಿತು. ನಮ ಕುಟುಂಬದಲ್ಲಿ ಎಂದೂ ಕೂಡ ಪ್ರಾಣಿಬಲಿ ಅರ್ಪಣೆ ಮಾಡಿಲ್ಲ. ನಾವು ದೈವಭಕ್ತರು. ನಮ ದೋಷ ಪರಿಹಾರಕ್ಕೆ ದೇವರ ಪೂಜೆ ಮಾಡುತ್ತೇವೆ. ಬಲಿ ವಿಚಾರಕ್ಕೂ ಸರ್ಕಾರ ಎಸ್‌‍ಐಟಿ ರಚನೆ ಮಾಡಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.

ನಮ ಕುಟುಂಬವನ್ನು ಸಂಪೂರ್ಣವಾಗಿ ನೆಲ ಕಚ್ಚಿಸಬೇಕೆಂಬ ಉದ್ದೇಶದಿಂದ ಇಂತಹ ಆರೋಪ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌‍ ಹೊಂದಾಣಿಕೆಯಿಂದ ಅವರ ರಾಜಕೀಯ ಭವಿಷ್ಯ ಮಾರಕವಾಗುತ್ತಿದೆ. ಆ ಕಾರಣಕ್ಕಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದರು.

ಮೂರೂ ಕ್ಷೇತ್ರಗಳಲ್ಲಿ ಗೆಲುವು :
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ಮೂರೂ ಕ್ಷೇತ್ರಗಳಲ್ಲಿ ಗೆಲ್ಲುತ್ತದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ 25 ಸ್ಥಾನ ಗೆಲ್ಲುವ ನಿರೀಕ್ಷೆಯಿತ್ತು. ಆ ನಿಟ್ಟಿನಲ್ಲಿ ಮತದಾನೋತ್ತರ ಸಮೀಕ್ಷಾ ವರದಿಗಳು ಬಂದಿದೆ. ಮೂರನೇ ಬಾರಿಗೆ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ಸಾಕಷ್ಟು ಶ್ರಮ ಹಾಕಿದ್ದಾರೆ. ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್‌‍ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕರಾದ ಹರೀಶ್‌, ಎಂ.ಟಿ.ಕೃಷ್ಣಪ್ಪ, ವಿಧಾನಪರಿಷತ್‌ ಸದಸ್ಯರಾದ ಶರವಣ, ತಿಪ್ಪೇಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES

Latest News