Friday, December 6, 2024
Homeರಾಜ್ಯರಾಷ್ಟ್ರಪತಿ ಭವನದ ಹೆಸರನ್ನು ಬದಲಾಹಿಸಿದ ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿ ಭವನದ ಹೆಸರನ್ನು ಬದಲಾಹಿಸಿದ ಸಿಎಂ ಸಿದ್ದರಾಮಯ್ಯ

ಹನೂರು, ಸೆ.28- ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಇನ್ನು ಮುಂದೆ ತಪೋಭವನ ಎಂದು ಪರಿವರ್ತನೆ ಆಗಲಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಾಲ್ಲೂಕಿನ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ 37 ಜೋಡಿ ಉಚಿತ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಉಚಿತ ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯಬೇಕು ಎಂದರು.

ಅಲ್ಲದೆ ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿಯಾಗಿರುತ್ತದೆ ಹಲವರು ವ್ಯವಸಾಯ ಕ್ಕೆಂದು ಸಾಲ ಮಾಡಿ ಆಡಂಬರದ ಮದುವೆ ಮಾಡುವುದನ್ನು ನಿಲ್ಲಿಸಬೇಕು. ಅದೇ ಹಣದಲ್ಲಿ ಮಕ್ಕಳ ಭವಿಷ್ಯ ರೂಪಿಸುವ ಆಲೋಚನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಗುಜರಿ ವ್ಯಾಪಾರಿಯ ಮನೆಯಲ್ಲಿದ್ದ 2.50 ಕೋಟಿ ಮೌಲ್ಯದ ಚಿನ್ನ-ಹಣ ಲೂಟಿ

ಚಿತ್ರಣ ಬದಲಾಗಲಿದೆ: ಮುಂದಿನ ಐದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮಲೈ ಮಹದೇಶ್ವರ ಶ್ರೀ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಶೌಚಾಲಯ ರಸ್ತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮ.ಬೆಟ್ಟವು ಮಹದೇಶ್ವರರು ತಪಸ್ಸು ಮಾಡಿದ ಶಕ್ತಿ ಕೇಂದ್ರ ಆಗಿದ್ದು ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ರಾಷ್ಟ್ರಪತಿ ಭವನವನ್ನು ಇನ್ನೂ ಮುಂದೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದರು.

ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ಕಾರ್ಯಕ್ರಮದ ವಹಿಸಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಮತ್ತು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ , ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಪ್ರಾಕಾರದ ಕಾರ್ಯದರ್ಶಿ ಸರಸ್ವತಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಗಣೇಶ್, ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಮರಿತಿಬ್ಬೇಗೌಡ, ಮಾಜಿ ಶಾಸಕರಾದ ಕೊಳ್ಳೇಗಾಲ ನಂಜುಂಡಸ್ವಾಮಿ, ಆರ್.ನರೇಂದ್ರ, ಮ.ಬೆಟ್ಟ ಗ್ರಾ.ಪಂ. ಅಧ್ಯಕ್ಷೆ ಅರ್ಚನಾ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

Latest News