Saturday, May 11, 2024
Homeರಾಜ್ಯಬಿಜೆಪಿ ಹೇಳಿದ ತಕ್ಷಣ ಸರ್ಕಾರ ಬೀಳಲ್ಲ : ಸಿಎಂ ಸಿದ್ದರಾಮಯ್ಯ

ಬಿಜೆಪಿ ಹೇಳಿದ ತಕ್ಷಣ ಸರ್ಕಾರ ಬೀಳಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಅ.31- ಬಿಜೆಪಿಯವರು ಹೇಳಿದ ತಕ್ಷಣ ನಮ್ಮ ಸರ್ಕಾರ ಬಿದ್ದು ಹೋಗುವುದಿಲ್ಲ. ಸ್ಥಿರತೆಯಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯ ಶಾಸಕ ರಮೇಶ್ ಜಾರಕಿಹೊಳಿ ನಿನ್ನೆ ಬೆಳಗಾವಿ ಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮುಂದಿನ ಮೂರು ತಿಂಗಳಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿಯಾಗಲಿದ್ದಾರೆ ಎಂದು ಹೇಳಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಬಹಳಷ್ಟು ಮಂದಿ ಸಚಿವರು, ನಾಯಕರು ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಈ ಹಿಂದೆ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ಸೇರಿ ಅನೇಕ ಪಕ್ಷಗಳು ಒಗ್ಗೂಡಿ ಮಹಾವಿಕಾಸ ಅಘಾಡಿ ಸರ್ಕಾರವನ್ನು ರಚಿಸಿದ್ದವು. ಶಿವಸೇನೆಯನ್ನು ಇಬ್ಬಾಗಿಸಿದ ಬಿಜೆಪಿ ಅದರ ನಾಯಕ ಏಕನಾಥ್‍ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿತ್ತು. ಮುಂದುವರೆದ ಭಾಗದಲ್ಲಿ ಎನ್‍ಸಿಪಿಯ ಅಜಿತ್ ಪವಾರ್ ಕೂಡ ಪಕ್ಷದಿಂದ ಹೊರ ಹೋಗಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿದ್ದಾರೆ. ಸರ್ಕಾರ ಪತನವಷ್ಟೆ ಅಲ್ಲ ಮಹಾರಾಷ್ಟ್ರದ ಎರಡು ಪ್ರಬಲ ಪ್ರಾದೇಶಿಕ ಪಕ್ಷಗಳಾದ ಶಿವಸೇನೆ, ಎನ್‍ಸಿಪಿಗಳೇ ಇಬ್ಬಾಗವಾಗಿವೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡ ಕಾಂಗ್ರೆಸ್, ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಭಾರೀ ಬಹುಮತವಿದ್ದರೂ ಅದನ್ನು ಕದಲಿಸಲು ಒಳಗೊಳಗೆ ಸಂಚುಗಳು ನಡೆಯುತ್ತಿವೆ ಎಂಬ ವದ್ಧಂತಿಗಳು ವ್ಯಾಪಕವಾಗಿವೆ.

ನನ್ನ ಶಕ್ತಿಯ ಮೂಲ ನನ್ನ ಅಜ್ಜಿ : ರಾಹುಲ್‍ ಗಾಂಧಿ

ಇತ್ತೀಚೆಗೆ ಕಾಂಗ್ರೆಸ್‍ನ ಮಂಡ್ಯ ಕ್ಷೇತ್ರದ ಶಾಸಕ ಗಣಿಗ ರವಿ ದಾವಣಗೆರೆಯಲ್ಲಿ ಹೇಳಿಕೆ ನೀಡಿ ಬಿಜೆಪಿಯವರು ಕಾಂಗ್ರೆಸ್‍ನ ನಾಲ್ವರು ಶಾಸಕರನ್ನು ಭೇಟಿ ಮಾಡಿ 50 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನ ನೀಡುವ ಆಮಿಷವೊಡ್ಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದ್ದರು. ಮೂಲಗಳ ಪ್ರಕಾರ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡ 66 ಶಾಸಕರ ಪಟ್ಟಿಯನ್ನು ಬಿಜೆಪಿ ನಾಯಕರು ತಯಾರು ಮಾಡಿಕೊಂಡಿದ್ದು, ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದ್ದಾರೆ ಎಂಬ ಆರೋಪಗಳಿವೆ.

ಇದಕ್ಕೆ ಪೂರಕವಾಗಿ ಬಿಜೆಪಿಯ ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರು ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎನ್ನುತ್ತಿದ್ದಾರೆ. ಇತ್ತೀಚೆಗಷ್ಟೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‍ನ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ ಶೀಘ್ರವೇ ಪತವಾಗಲಿದೆ ಎಂದಿದ್ದರು. ತಮ್ಮ ಸರ್ಕಾರವನ್ನು ಪತನಗೊಳಿಸುವ ಸಂಚು ನಡೆದಿರುವುದನ್ನು ಖುದ್ದು ಮುಖ್ಯಮಂತ್ರಿಯವರೂ ಒಪ್ಪಿಕೊಂಡಿದ್ದರು.

ಸರ್ದಾರ್ ಪಟೇಲ್‌ಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ

ಇಂದು ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ವಿಧಾನಸೌಧದಲ್ಲಿ ಪ್ರತಿಜ್ಞಾವಿ ಬೋಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿಯವರು, ಬಿಜೆಪಿಯವರ ಹೇಳಿಕೆಗಳಿಗೆ ಉಪ್ಪು ಖಾರ ಹಾಕಲಾಗುತ್ತಿದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದರು. ನಮ್ಮ ಸರ್ಕಾರ ಸ್ಥಿರತೆಯಿಂದ ಕೂಡಿದೆ. ಬಿಜೆಪಿಯವರು ಹೇಳಿದ ತಕ್ಷಣ ಸರ್ಕಾರ ಬಿದ್ದು ಹೋಗಲು ಸಾಧ್ಯವಿಲ್ಲ ಎಂದು ದೃಢವಾಗಿ ಹೇಳಿದರು.

RELATED ARTICLES

Latest News