ಬೆಂಗಳೂರು,ಡಿ.17- ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಿನ್ನೆ ತಾವು ಆರೋಗ್ಯ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಚರ್ಚೆ ನಡೆಸಿದ್ದು, ಸಭೆ ನಡೆಸುವಂತೆ ಸೂಚನೆ ನೀಡಿದ್ದೆ. ಆರೋಗ್ಯ ಕ್ಷೇತ್ರದ ತಜ್ಞರೊಂದಿಗೆ ಚರ್ಚೆ ನಡೆಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಲಹೆ ನೀಡಲಾಗಿದೆ. ಅದರಂತೆ ಅವರು ಸಭೆ ನಡೆಸಿದ್ದಾರೆ. ಇಂದು ಆರೋಗ್ಯ ಸಚಿವರ ಜೊತೆ ಮಾತನಾಡಲು ಸಾಧ್ಯವಾಗಿಲ್ಲ. ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ಹಾಗೂ ಮುಂಜಾಗ್ರತೆಯನ್ನು ರಾಜ್ಯಸರ್ಕಾರ ವಹಿಸಲಿದೆ ಎಂದು ಸ್ಪಷ್ಟಪಡಿಸಿದರು.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡಿದೆ. ಪಕ್ಷದ ಶಾಸಕರು, ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದವರು , ಕಾರ್ಯಕರ್ತರು ಹೇಳಿದವರಿಗೆ ಟಿಕೆಟ್ ನೀಡಿದ್ದೇವೆ. ಪ್ರತೀ ಜಿಲ್ಲೆಗೂ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಅವರು ಸಭೆ ನಡೆಸಿ ಮೂರು ಜನರ ಹೆಸರನ್ನು ಸೂಚಿಸಲಿದ್ದಾರೆ. ಅವರಲ್ಲಿ ಯಾರು ಮುಖ್ಯ ಹಾಗೂ ಸೂಕ್ತ ಎಂಬುದನ್ನು ಚರ್ಚಿಸಿ ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.
ಅಲ್ಪಸಂಖ್ಯಾತರು ಮೂರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಈ ಹಿಂದೆ ನಾವು ಅವರಿಗೆ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ. ಈ ಚುನಾವಣೆಯಲ್ಲೂ ಅವಕಾಶ ಕಲ್ಪಿಸುತ್ತೇವೆ. ಬಿಜೆಪಿಯವರು ಏನು ಮಾಡುತ್ತಾರೆ, ಅಲ್ಪಸಂಖ್ಯಾತರ ಮತವೇ ಬೇಡ ಎಂದು ಹೇಳುತ್ತಿದ್ದಾರೆ. ಅವರೇನು ಭಾರೀಯ ಪ್ರಜೆಗಳಲ್ಲವೇ ಎಂದು ಪ್ರಶ್ನಿಸಿದರು.
ಬಿಜೆಪಿ ಶಾಸಕ ಯತ್ನಾಳ್ ಗಡ್ಡ ಬಿಟ್ಟಿರುವವರು, ಬುರ್ಖಾ ಹಾಕಿರುವವರು ಬರಬೇಡಿ, ನಾನು ಭೇಟಿ ಮಾಡುವುದಿಲ್ಲ ಎನ್ನುತ್ತಾರೆ. ಬಿಜೆಪಿ ಬಹುತ್ವದ ಪಕ್ಷ ಅಲ್ಲ. ಭಾರತ ಬಹುತ್ವವನ್ನು ಒಪ್ಪಿಕೊಂಡಿದೆ. ದೇಶದಲ್ಲಿರುವ ಎಲ್ಲರೂ ಪ್ರಜೆಗಳೇ. ಎಲ್ಲರ ರಕ್ಷಣೆ ನಮ್ಮ ಹೊಣೆ ಎಂದು ಹೇಳಿದರು.
ತಾವು ಹುಬ್ಬಳ್ಳಿಯ ಮೌಲ್ವಿಗಳ ಸಮಾವೇಶದಲ್ಲಿ ಭಾಗವಹಿಸಿದ್ದನ್ನು ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸುತ್ತಿರುವುದು ಸಂಪೂರ್ಣ ವೈಯಕ್ತಿಕ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ನಾಯಕರು ಯತ್ನಾಳ್ ಅವರನ್ನು ಸೋಲಿಸಲು ಸಕ್ರಿಯವಾಗಿ ಕೆಲಸ ಮಾಡಿದರು. ಆ ಸಿಟ್ಟಿಗೆ ಯತ್ನಾಳ್ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಸರ್ಕಾರ ಈಗಾಗಲೇ ಕಠಿಣ ಕ್ರಮ ಕೈಗೊಂಡಿದೆ. ಆರೋಪಿಗಳನ್ನು ಬಂಸಲಾಗಿದೆ. ಆದರೆ ಬಿಜೆಪಿಯ ನಾಯಕರು ದುರುದ್ದೇಶಪೂರಕವಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಘಟನೆಯ ಬಗ್ಗೆ ರಾಹುಲ್‍ಗಾಂಯವರು ಹೇಳಿಕೆ ನೀಡಬೇಕೆಂಬ ಬಿಜೆಪಿಯವರ ವಾದ ಅಪ್ರಸ್ತುತ.
ವಿಮಾನನಿಲ್ದಾಣದಲ್ಲಿ ತಾವು ಇಳಿಯುತ್ತಿದ್ದಂತೆ ಘಟನೆ ಬಗ್ಗೆ ಮಾಹಿತಿ ದೊರೆಯಿತು. ತಕ್ಷಣವೇ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಗೃಹಸಚಿವ ಪರಮೇಶ್ವರ್ ಅವರನ್ನು ಸ್ಥಳಕ್ಕೆ ಕಳುಹಿಸಿ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಾಯಿತು. ಸರ್ಕಾರ ಯಾವುದೇ ಹಂತದಲ್ಲೂ ವೈಫಲ್ಯವಾಗಿಲ್ಲ ಎಂದರು.
ಉತ್ತರ ಪ್ರದೇಶದಲ್ಲಿ ಬಿಜೆಪಿಯ ಶಾಸಕ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಆತನಿಗೆ ನಿನ್ನೆಯಷ್ಟೇ 25 ವರ್ಷ ಜೈಲುಶಿಕ್ಷೆಯಾಗಿದೆ. ಅಂತವರನ್ನು ಪಕ್ಷದಲ್ಲಿ ಉಳಿಸಿಕೊಂಡಿರುವ ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯೇ. ಬಿಜೆಪಿಯ ರಾಜಕೀಯ ಅಧ್ಯಕ್ಷ ದೆಹಲಿಯಿಂದ ಸಂಸದರ ತಂಡ ಕಳುಹಿಸಿದ್ದಾರೆ. ಹೆಣ್ಣು ಮಕ್ಕಳ ದೌರ್ಜನ್ಯ ಮಾಡುವ ಬಿಜೆಪಿಯವರು ನಮ್ಮ ಪಕ್ಷದವರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಕಚೇರಿಯ ಅಧಿಕಾರಿ ಎಂದು ವಂಚಿಸುತ್ತಿದ್ದ ವ್ಯಕ್ತಿಯ ಬಂಧನ
ಕೋಲಾರದ ಮಾಲೂರಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಬಗ್ಗೆ ಈಗಷ್ಟೇ ಸುದ್ದಿ ಬಂದಿದೆ. ಸಂಪೂರ್ಣ ವರದಿ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು. ಎನ್‍ಸಿಆರ್‍ಬಿ ಪ್ರಕಾರ ಯಾರ ಆಡಳಿತದಲ್ಲಿ ಹೆಣ್ಣು ಮಕ್ಕಳು, ಮಕ್ಕಳ ಮೇಲೆ ಹೆಚ್ಚು ದೌರ್ಜನ್ಯಗಳಾಗಿವೆ ಎಂಬುದನ್ನು ಕಣ್ತೆರೆದು ನೋಡಲಿ. ಬಿಜೆಪಿ ಮಕ್ಕಳ ಮತ್ತು ಮಹಿಳೆಯರ ಮೇಲೆ ದೌರ್ಜನ್ಯವೆಸಗುವ ಪಕ್ಷ ಎಂದು ಆರೋಪಿಸಿದರು.
ಬಿಜೆಪಿಯವರು ದುರುದ್ದೇಶಪೂರಕವಾದಂತಹ ರಾಜಕೀಯ ಮಾಡುತ್ತಾರೆ. ನಮ್ಮ ಸರ್ಕಾರ ಯಾರ ಮೇಲೆ ದೌರ್ಜನ್ಯ ನಡೆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತದೆ. ಎಲ್ಲರಿಗೂ ರಕ್ಷಣೆ ನೀಡುವುದು ನಮ್ಮ ಹೊಣೆಗಾರಿಕೆ. ಅದರಲ್ಲೂ ಮಹಿಳೆಯನ್ನು ವಿವಸ್ತ್ರಗೊಳಿಸುವುದು , ಕಂಬಕ್ಕೆ ಕಟ್ಟಿಹಾಕಿ ಹೊಡೆಯುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ. ಕಾನೂನು ಮೀರುವವರನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಆಯೋಗದ ವರದಿಯಲ್ಲಿರುವ ಅಂಶಗಳ ಬಗ್ಗೆ ಊಹೆಗಳ ಆಧಾರದ ಮೇಲೆ ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ವರದಿಯಲ್ಲಿಯೇನಿದೆ ಎಂದು ಯಾರಿಗೂ ಗೊತ್ತಿಲ್ಲ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗಲೇ ವರದಿ ಸೋರಿಕೆಯಾಗಿದೆ ಎಂಬ ಆರೋಪಗಳಿವೆ. ಆದರೆ ಅದೆಲ್ಲಾ ಸುಳ್ಳು. ಯಾವ ಮಾಹಿತಿಯೂ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಬರಗಾಲದ ಹಿನ್ನೆಲೆಯಲ್ಲಿ ಸಹಕಾರ ಸಂಘಗಳಲ್ಲಿ ರೈತರು ಪಡೆದಿರುವ ಸಾಲದ ಅಸಲನ್ನು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವ ನಿರ್ಧಾರವನ್ನುನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ಹೇಳಿದರು.