Saturday, December 14, 2024
Homeರಾಜ್ಯಬರ ಪರಿಹಾರ ಕೆಲಸ ಆರಂಭವಾಗಿದೆ: ಸಿಎಂ ಸಿದ್ದರಾಮಯ್ಯ

ಬರ ಪರಿಹಾರ ಕೆಲಸ ಆರಂಭವಾಗಿದೆ: ಸಿಎಂ ಸಿದ್ದರಾಮಯ್ಯ

ವಿಜಯಪುರ, ನ.20- ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು.

ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದರು.

ಐಸಿಸಿ ವಿಶ್ವಕಪ್ ಪ್ಲೇಯಿಂಗ್11ಗೆ ರೋಹಿತ್ ಶರ್ಮಾ ನಾಯಕ

ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಈಗ ಮಧ್ಯ ಪ್ರದೇಶ ಹಾಗೂ ಇತರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು. ಅಧಿಕಾರಲ್ಲಿದ್ದಾಗ ಏನು ಮಾಡದ ಬಿಜೆಪಿಯವರು ಈಗ ಜನಪ್ರಿಯ ಯೋಜನೆಗಳ ಬೆನ್ನು ಹತ್ತಿದ್ದಾರೆ. ಆದರೆ ಬಿಜೆಪಿಯವರು ನುಡಿದಂತೆ ನಡೆಯುವ ಜನ ಅಲ್ಲ. ಅವರು ಏನೇ ಹೇಳಿದರು ಸಾರ್ವಜನಿಕರು ನಂಬುವುದಿಲ್ಲ ಎಂದರು.

ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ತಮ್ಮ ಮಗಳ ಮದುವೆಗಾಗಿ ಆಹ್ವಾನ ನೀಡಲು ಇಂದು ತಮ್ಮ ಮನೆಗೆ ಭೇಟಿ ನೀಡಿದ್ದರು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕುಮಾರಸ್ವಾಮಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ. ವಿದ್ಯುತ್ ಕಳ್ಳತನ ಮಾಡಿ ತಪ್ಪು ಒಪ್ಪಿಕೊಂಡು ದಂಡ ಕಟ್ಟಿದ್ದಾರೆ. ಅಂತಹವರು ಇನ್ನೊಬ್ಬರನ್ನು ಪ್ರಶ್ನಿಸುವ ಅಧಿಕಾರ ಹೊಂದಿದ್ದಾರೆಯೇ ? ಅವರ ಕಾಲದಲ್ಲಿ ವರ್ಗಾವಣೆಯಲ್ಲಿ ದಂಧೆ ಮಾಡಿದ್ದು ಜಗತ್ತಿಗೆ ಗೋತ್ತಿದೆ. ನಮ್ಮ ವಿರುದ್ಧ ದ್ವೇಷ, ಅಸೂಯೆಯಿಂದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಟೀಕೆಗಳಿಗೆ ಯಾವುದಕ್ಕೂ ಆಧಾರಗಳಿಲ್ಲ ಎಂದು ಹೇಳಿದರು.

ಮಾರ್ಷಲ್‍ಗಳ ಸೇವೆಯಲ್ಲಿ ಕೋಟಿ ಕೋಟಿ ಲೂಟಿ

ಡಿ.ಕೆ.ಶಿವಕುಮರ್ ಅವರು ಮುಖ್ಯಮಂತ್ರಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೆಂದ್ರರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಮ್ಮ ಪಕ್ಷದ ವ್ಯವಹಾರಗಳನ್ನು ನಾವು ನೋಡಿಕೊಳ್ಳುತ್ತೇವೆ, ಅವರಿಗೆ ಏಕೆ ಚಿಂತೆ ಎಂದು ಹೇಳಿದರು.

RELATED ARTICLES

Latest News