Saturday, November 23, 2024
Homeರಾಜಕೀಯ | Politicsಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಮತಬೇಟೆ

ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಮತಬೇಟೆ

ಬೆಂಗಳೂರು,ಏ.8- ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರನೇ ದಿನವೂ ಬೆಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಬಿರುಸಿನ ಚುನಾವಣಾ ಪ್ರಚಾರ ನಡೆಸಿ ಮತಯಾಚನೆ ಮಾಡಿದ್ದಾರೆ.

ಬೆಳಿಗ್ಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ ರಾಗಿಗುಡ್ಡ, ಜಯನಗರ 9ನೇ ಬ್ಲಾಕ್, ಕಾರ್ಪೊ ರೇಷನ್ ಕಾಲೋನಿ, ಡಿ.ಜಿ.ಮುಖ್ಯರಸ್ತೆ, ತಿಲಕ್ ನಗರ, ಶಕ್ತಿ ಮಾರಿಯಮ್ಮ ದೇವಸ್ಥಾನದ ಜಂಕ್ಷನ್, ಬೈರಸಂದ್ರದ 8ನೇ ಮುಖ್ಯರಸ್ತೆ, ಸೋಮೇಶ್ವರ ನಗರ, ಬಿಟಿಎಸ್ ರಸ್ತೆ, ಮಡಿವಾಳ, ಕೋರಮಂಗಲ, ಈಜಿ ಪುರ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದರು.

ನಿನ್ನೆ ಕೂಡ ತಡರಾತ್ರಿಯವರೆಗೂ ಬೆಂಗಳೂರು ದಕ್ಷಿಣದಲ್ಲಿ ಪ್ರಚಾರ ನಡೆಸಿದ ಸಿದ್ದರಾಮಯ್ಯ ಅವರು ಸೌಮ್ಯರೆಡ್ಡಿ ಅವರಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದ್ದರು. ಇಂದು ಮತ್ತೊಂದು ಸುತ್ತಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಮಧ್ಯಾಹ್ನದ ಬಳಿಕ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ಖಾನ್ ಪರವಾಗಿ ಮತಯಾಚನೆ ನಡೆಸಿದ್ದಾರೆ. ರಾಜಾಜಿನಗರ, ಗಾಂಧಿನಗರ, ಸಿ.ವಿ.ರಾಮನ್ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬಹಿರಂಗ ಸಭೆಗಳು, ರೋಡ್ ಶೋಗಳಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳ ಪೈಕಿ ಬೆಂಗಳೂರಿನಲ್ಲಿ 3 ಕ್ಷೇತ್ರಗಳಿವೆ. ಇಲ್ಲಿ ಡಿ.ಕೆ.ಶಿವಕುಮಾರ್ರವರು ಉಸ್ತುವಾರಿ ಸಚಿವರಾಗಿದ್ದರೂ ಕೂಡ ರಾಜಧಾನಿ ಬೆಂಗಳೂರಿನಲ್ಲಿ ಮರು ಪ್ರಾಬಲ್ಯ ಸಾಧಿಸುವುದು ಕಾಂಗ್ರೆಸ್ನ ಹವಣಿಕೆಯಾಗಿದೆ.

ಏ.14,15,16 ರಂದು ಮೂರು ದಿನಗಳ ಕಾಲ ತವರು ಕ್ಷೇತ್ರವಾದ ಮೈಸೂರು-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಅದಕ್ಕೂ ಮುನ್ನ ಬೆಂಗಳೂರಿನಲ್ಲಿ ಹೆಚ್ಚು ಜನರನ್ನು ತಲುಪುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಇರಾದೆಯೊಂದಿಗೆ ಮುಖ್ಯಮಂತ್ರಿ ಖುದ್ದು ಅಖಾಡಕ್ಕೆ ಇಳಿದಿದ್ದಾರೆ.

RELATED ARTICLES

Latest News