Friday, February 23, 2024
Homeರಾಜ್ಯಸಂವಿಧಾನದ ಧ್ಯೇಯೋದ್ದೇಶಗಳ ಜಾರಿ ಸರ್ಕಾರದ ಜವಾಬ್ದಾರಿ : ಸಿಎಂ

ಸಂವಿಧಾನದ ಧ್ಯೇಯೋದ್ದೇಶಗಳ ಜಾರಿ ಸರ್ಕಾರದ ಜವಾಬ್ದಾರಿ : ಸಿಎಂ

ಬೆಂಗಳೂರು,ಡಿ.30- ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸಿ, ಸಂವಿಧಾನದ ಆಶಯಗಳನ್ನು ಈಡೇರಿಸಿ, ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು ಎಂದರು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು.

ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ , ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ ಎಂದರು.

ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ

ಹೋರಾಟಗಳು ಅಹಿಂಸಾತ್ಮಕವಾಗಿರಬೇಕು:
ಮನುಷ್ಯತ್ವ ಅಂತಿಮ ಗುರಿಯಾಗಬೇಕು. ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ ಹೋರಾಟಕ್ಕೆ ಸಾವಿಲ್ಲ ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು ಎಂದು ಹೇಳಿದರು.

ಮಾನವೀಯ ಸಮಾಜ ನಿರ್ಮಾಣ ಗುರಿ ಹೊಂದಿರುವ ಮಠ:
ಚಿಕ್ಕಬಳ್ಳಾಪುರ ಶ್ರೀ ನಿಡುಮಾಮಿಡಿ ಮಠದ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಶ್ರೀ ಮಠವು ಯಾವುದೇ ಜಾತಿ, ಧರ್ಮ, ಸಂಸ್ಕøತಿಗಳಿಗೆ ಮೀಸಲಾಗದ ಜಾತ್ಯಾತೀತವಾದ ಮಾನವ ಧರ್ಮ ಪೀಠ ಎನಿಸಿದೆ. ಸ್ವಾಮೀಜಿಗಳು ನಿರ್ಭೀತಿಯಿಂದ ನಿಷ್ಕಲ್ಮಶವಾಗಿ ಜಾತ್ಯಾತೀತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ತಮ್ಮ ಜೀವನದುದ್ದಕ್ಜೂ ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶ್ರೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.

RELATED ARTICLES

Latest News