Thursday, December 26, 2024
Homeರಾಜ್ಯಗೃಹಲಕ್ಷಿ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಅತ್ತೆ-ಸೊಸೆ, ಸಿಎಂ ಸಿದ್ದರಾಮಯ್ಯ ಸಂತಸ

ಗೃಹಲಕ್ಷಿ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಅತ್ತೆ-ಸೊಸೆ, ಸಿಎಂ ಸಿದ್ದರಾಮಯ್ಯ ಸಂತಸ

CM Siddaramaiah happy with mother-in-law and daughter-in-law who dug borewell with Grihalakshi money

ಬೆಂಗಳೂರು,ಡಿ.15– ನಮ ಸರ್ಕಾರದ ಗೃಹಲಕ್ಷಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್‌ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳನ್ನು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ತಮ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್‌ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್ವೆಲ್‌ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ.

ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ.

ಗೃಹಲಕ್ಷಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಅವರು ಹೇಳಿದ್ದಾರೆ.

RELATED ARTICLES

Latest News