Tuesday, May 7, 2024
Homeರಾಜ್ಯಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜ.7- ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ ಸೇರಿದಂತೆ ಚಿತ್ರಕಲಾ ಪರಿಷತ್ತಿನ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಕುಮಾರಕೃಪದಲ್ಲಿರುವ ಚಿತ್ರಕಲಾ ಪರಿಷತ್ತಿನಲ್ಲಿ 21 ನೇ ಚಿತ್ರಸಂತೆಯನ್ನು ಕ್ಯಾನ್‍ವಾಸ್ ಮೇಲೆ ಸಹಿ ಹಾಕುವ ಮೂಲಕ ಉದ್ಘಾಟಿಸಿದ ಮುಖ್ಯಮಂತ್ರಿಯವರು ಮಾತನಾಡಿದರು.

ಈ ಬಾರಿಯ ಚಿತ್ರಸಂತೆಯನ್ನು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಅಭೂತಪೂರ್ವ ಸಾಧನೆಗಳನ್ನು ಮಾಡಿದ ವಿಜ್ಞಾನಿಗಳಿಗೆ ಸಮರ್ಪಿಸಿರುವುದು ಸ್ವಾಗತಾರ್ಹ ಎಂದರು. ಈ ಮೊದಲು 2013 ರಿಂದ 2018 ರವರೆಗೆ ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ವರ್ಷವೂ ಚಿತ್ರಸಂತೆಯನ್ನು ಉದ್ಘಾಟನೆ ಮಾಡಿದ್ದೆ. ಇದು ನನಗೆ ಮುಖ್ಯಮಂತ್ರಿಯಾಗಿ 6ನೇ ಕಾರ್ಯಕ್ರಮ ಎಂದರು.

ಚಿತ್ರಕಲಾ ಪರಿಷತ್ತಿನ ಬೆಳವಣಿಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿಯವರು, ವಿವಿಧ ರಾಜ್ಯಗಳಿಂದ ಆಗಮಿಸಿರುವ ಕಲಾವಿದರಿಗೆ ಸ್ವಾಗತ ಕೋರಿದರು. ಈ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಚಿತ್ರಕಲಾ ಪರಿಷತ್‍ಗೆ 1 ಕೋಟಿ ರೂ.ಗಳ ಅನುದಾನ ನೀಡಿದ್ದೆ, ಈ ಬಾರಿ 10 ಲಕ್ಷ ರೂ.ಗಳನ್ನು ಕೊಡುವುದಾಗಿ ಭರವಸೆ ನೀಡಿದ್ದೆ. ಅದನ್ನು 50 ಲಕ್ಷ ರೂ.ಗಳಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಇದೇ ವೇಳೆ ಮತ್ತಷ್ಟು ಹೆಚ್ಚು ಅನುದಾನ ನೀಡುವಂತೆ ಚಿತ್ರಕಲಾ ಪರಿಷತ್‍ನ ಪ್ರಭಾಕರ್ ಮನವಿ ಮಾಡಿದಾಗ, ‘ಏಯ್ ಸುಮ್ನಿರಪ್ಪ, ಎಲ್ಲವನ್ನೂ ಒಳಗೊಂಡು 50 ಲಕ್ಷ ರೂ. ಕೊಡುತ್ತೇನೆ, ಮುಂದಿನ ವರ್ಷ ಹೆಚ್ಚು ಮಾಡುತ್ತೇನೆ ಎಂದು ಭರವಸೆ ನೀಡಿದರು.

ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ

ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಒಂದೇ ರಸ್ತೆಯಲ್ಲಿ ಸಾವಿರಾರು ಕಲಾವಿದರು ಭಾಗವಹಿಸುವಂತಹ ಕಾರ್ಯಕ್ರಮ ವಿಶ್ವದಲ್ಲಿ ಎಲ್ಲಿಯೂ ನಡೆಯುವುದಿಲ್ಲ. ಅದು ಬೆಂಗಳೂರಿನಲ್ಲಿ 2003 ರಿಂದಲೂ ನಿರಂತರವಾಗಿ ನಡೆದುಕೊಂಡು ಬಂದಿದೆ. ಮುಖ್ಯಮಂತ್ರಿಗಳ ನಿವಾಸವಿರುವ ಕುಮಾರಕೃಪ ರಸ್ತೆಯಲ್ಲಿ ಒಂದು ದಿನ ಸಂಚಾರವನ್ನು ಸ್ಥಗಿತಗೊಳಿಸಿ ಚಿತ್ರಸಂತೆ ನಡೆಸುತ್ತಿರುವುದು ಹೆಮ್ಮೆಯ ವಿಚಾರ. ಕುಮಾರಕೃಪ, ಗಾಂಧಿ ಭವನ, ಸೇವಾದಳ ರಸ್ತೆಗಳಷ್ಟೇ ಅಲ್ಲದೆ ಈ ಬಾರಿ ಶಿವಾನಂದ ವೃತ್ತವನ್ನು ಸಂಪರ್ಕಿಸುವ ಮೇಲ್ಸೇತುವೆಯ ಕೆಳಭಾಗದಲ್ಲೂ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದರು.

22 ರಾಜ್ಯಗಳಿಂದ ಸುಮಾರು 2,900 ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಲು ಆಸಕ್ತಿ ವಹಿಸಿದ್ದರು. ಆದರೆ 1,684 ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಅರ್ಜಿ ಸಲ್ಲಿಸಿದ 280 ವಿಶೇಷ ಚೇತನರು ಹಾಗೂ ಹಿರಿಯ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು. ಸಚಿವರಾದ ಎಚ್.ಕೆ.ಪಾಟೀಲ್, ಡಾ.ಎಂ.ಸಿ.ಸುಧಾಕರ್, ಶಾಸಕರಾದ ರಿಜ್ವಾನ್ ಅರ್ಷದ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಅಜಯ್ ಸಿಂಗ್, ಚಿತ್ರಕಲಾ ಪರಿಷತ್‍ನ ಉಪಾಧ್ಯಕ್ಷ ಪ್ರಭಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಡಿಜೆ ಹಳ್ಳಿ-ಕೆಜೆ ಹಳ್ಳಿ ಪ್ರಕರಣದ ಕೈದಿಗಳ ಬಿಡುಗಡೆಗೆ ಡಿಸಿಎಂ ಬಳಿ ಮನವಿ

ತಮಿಳುನಾಡಿನ ಕಲಾವಿದ ಮೇಯಪ್ಪನ್ ನೇತೃತ್ವದಲ್ಲಿ ಅದ್ಭುತವಾದ ಚಿತ್ರಕಲೆಯನ್ನು ಮುಖ್ಯಮಂತ್ರಿಯವರ ಖಾಸಗಿ ಸಂಗ್ರಹಕ್ಕೆ ಕೊಡುಗೆಯಾಗಿ ನೀಡಲಾಯಿತು.

RELATED ARTICLES

Latest News