ಬೆಂಗಳೂರು, ನ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ತಮ ಪತ್ನಿ ಪಾರ್ವತಿ ಅವರ ಆರೋಗ್ಯ ವಿಚಾರಿಸಿದ್ದಾರೆ.ಶ್ವಾಸಕೋಶ ಸಮಸ್ಯೆಯಿಂದಾಗಿ ಅನಾರೋಗ್ಯಕೀಡಾದ ಪಾರ್ವತಿ ಅವರನ್ನು ಎರಡು ದಿನಗಳ ಹಿಂದೆ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆ ಸಂದರ್ಭದಲ್ಲಿ ದೆಹಲಿಯಲ್ಲಿದ್ದ ಸಿದ್ದರಾಮಯ್ಯ ಅವರು ವಾಪಸ್ ಬಂದ ಬಳಿಕ ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ತೆರಳಿ ಪತ್ನಿ ಆರೋಗ್ಯ ವಿಚಾರಿಸಿದರು.ಬಳಿಕ ಸುದ್ದಿಗಾರರ ಜೊತೆ ಮಾತನಾಡುವಾಗ ಪಾರ್ವತಿ ಅವರ ಆರೋಗ್ಯ ಸ್ಥಿರವಾಗಿದೆ. ಎರಡು, ಮೂರು ದಿನಗಳ ಬಳಿಕ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ ಎಂದಿದರು.
ಇಂದು ಎರಡನೇ ಬಾರಿಗೆ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ವೈದ್ಯರ ಜೊತೆ ಚರ್ಚೆ ನಡೆಸಿದ್ದು, ಪತ್ನಿ ಆರೋಗ್ಯ ವಿಚಾರಿಸಿದ್ದಾರೆ. ಡಾ. ಯತೀಂದ್ರ ಆಸ್ಪತ್ರೆಯಲ್ಲೇ ಉಳಿದು ಅವರ ತಾಯಿಯ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ.
