Thursday, February 22, 2024
Homeರಾಜಕೀಯಶೆಟ್ಟರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಶೆಟ್ಟರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಬೆಂಗಳೂರು,ಡಿ.17- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಹುಟ್ಟುಹಬ್ಬದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ಹುಬ್ಬಳ್ಳಿ-ಧಾರವಾಡ ಪ್ರವಾಸದಲ್ಲಿರುವ ಸಿದ್ದರಾಮಯ್ಯ, ಬೆಳಿಗ್ಗೆ ಶೆಟ್ಟರ್ ಅವರ ಮನೆಗೆ ತೆರಳಿ ಉಪಹಾರ ಸೇವಿಸಿದ್ದಲ್ಲದೆ, 68 ನೇ ಹುಟ್ಟುಹಬ್ಬದ ಅಂಗವಾಗಿ ಶುಭ ಹಾರೈಸಿದರು.

ಕುಟುಂಬದ ಸದಸ್ಯರ ಜೊತೆ ಸಮಯ ಕಳೆದ ಮುಖ್ಯಮಂತ್ರಿಯವರು ಉಭಯ ಕುಶಲೋಪರಿಯನ್ನು ವಿಚಾರಿಸಿದರು. ಕುವೈತ್ ಪ್ರಧಾನಿ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಶೋಕಾಚರಣೆ ಜಾರಿಯಲ್ಲಿದೆ. ಹೀಗಾಗಿ ಹುಟ್ಟುಹಬ್ಬದ ಸಂದರ್ಭದಲ್ಲಿ ಹಾರ, ಸನ್ಮಾನ ಯಾವುದೂ ಬೇಡ ಎಂದು ತಮಗೆ ಹಾಕಲು ತಂದಿದ್ದ ಹಾರವನ್ನು ನಯವಾಗಿ ನಿರಾಕರಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದಾಗಿ ರಾಜಕೀಯ ಪಲ್ಲಟಗಳಾಗಿತ್ತು. ಕಾಂಗ್ರೆಸ್ 135 ಸ್ಥಾನ ಗೆಲ್ಲಲು ಶೆಟ್ಟರ್ ಅವರ ಸೇರ್ಪಡೆಯೂ ಸಹಕಾರಿಯಾಗಿತ್ತು ಎಂಬ ವಿಶ್ಲೇಷಣೆ ಇದೆ. ಅದರ ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಶೆಟ್ಟರ್ ಸೋಲು ಕಂಡಿದ್ದರು. ಆದರೂ ಕಾಂಗ್ರೆಸ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸಿದೆ.

ಸಂಸತ್‍ನ ಭದ್ರತಾ ಲೋಪ : ಕೊನೆಗೂ ಮೌನ ಮುರಿದ ಮೋದಿ

ಶೆಟ್ಟರ್ ಅವರ ಮನೆಯಲ್ಲಿ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯನವರು ಮಾತನಾಡುವ ವೇಳೆ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಶೆಟ್ಟರ್ ಅವರಿಗೆ ಅವಕಾಶ ಸಿಗಲಿದೆಯೇ ಎಂಬ ಪ್ರಶ್ನೆ ಎದುರಾಯಿತು. ನಾವು ಎಲ್ಲರ ಅಭಿಪ್ರಾಯ ಕೇಳುತ್ತಿದ್ದೇವೆ. ಶೆಟ್ಟರ್‍ರವರು ಆಕಾಂಕ್ಷಿ ಇರಬಹುದು ಎಂದು ನಾನು ಅಂದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಜಗದೀಶ್ ಶೆಟ್ಟರ್, ಇಲ್ಲ…ಇಲ್ಲ… ನಾನು ಆಕಾಂಕ್ಷಿಯಲ್ಲ. ಎಂದು ಮೂರು ಬಾರಿ ಹೇಳಿ, ಎಲ್ಲವನ್ನೂ ನೀವೇ ಸೃಷ್ಟಿಸುತ್ತಿದ್ದೀರಾ ಎಂದು ಮಾದ್ಯಮದವರಿಗೆ ಹೇಳಿದರು.

ಅವರು ಆಕಾಂಕ್ಷಿಯಲ್ಲವಂತೆ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ, ಎಲ್ಲರ ಅಭಿಪ್ರಾಯದ ಬಳಿಕ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.

RELATED ARTICLES

Latest News