Thursday, December 12, 2024
Homeರಾಜ್ಯಪೇಜಾವರ ಶ್ರೀಗಳ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪ

ಪೇಜಾವರ ಶ್ರೀಗಳ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪ

CM Siddaramaiah objects to Pejawara Swamiji statement

ಬೆಂಗಳೂರು,ನ.26- ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಬಾಧ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳು ಸಂವಿಧಾನದಂತೆ ನಡೆದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತೆ ಕೆಲಸ ಮಾಡಬೇಕು.

ಆದ್ದರಿಂದ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿ, ಅದರ ಆಶಯಗಳನ್ನು ವಿದ್ಯಾರ್ಥಿಗಳು ಮನನ ಮಾಡಿಕೊಳ್ಳಬೇಕೆಂಬುದು ನಮ ಉದ್ದೇಶವಾಗಿದೆ ಎಂದರು.

ಸರ್ಕಾರ ಸಂವಿಧಾನ ರಕ್ಷಿಸುವ ಕಾರ್ಯ ಮಾಡುತ್ತಿದೆ :
ಸಂವಿಧಾನವನ್ನು ತಿದ್ದುಪಡಿ ಮಾಡಲಾಗುವುದು ಎಂಬ ಬಿಜೆಪಿಯವರ ಧೋರಣೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಸಂವಿಧಾನಕ್ಕೆ ವಿರೋಧವಾಗಿರುವವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ.

ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳೂ ಸಹ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮೆ ನಮದು ಎಂದರು.

RELATED ARTICLES

Latest News