Friday, November 22, 2024
Homeರಾಜಕೀಯ | Politicsನುಡಿದಂತೆ ನಡೆದಿದ್ದೇವೆ, ಒಂದು ವರ್ಷ ಪೂರೈಸಿದ್ದೇವೆ : ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ನುಡಿದಂತೆ ನಡೆದಿದ್ದೇವೆ, ಒಂದು ವರ್ಷ ಪೂರೈಸಿದ್ದೇವೆ : ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 20- ಕಾಂಗ್ರೆಸ್‌‍ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಆದರೆ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಸೇರಿ ನಮ್ಮ ಬಲ ಕುಗ್ಗಿಸಲು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.

ಕಾಂಗ್ರೆಸ್‌‍ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿ ಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ ಕೈಗಳ ಬಲ ಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ.

ಇಂತಹ ಸವಾಲುಗಳ ನಡುವೆಯೂ ನಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು ಎಂದಿದ್ದಾರೆ.

ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸಗಳನ್ನಾಗಿ ಬಳಸಿಕೊಂಡು ನಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ.

ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದ್ದೆಿವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಭರವಸೆ ನೀಡಿದ್ದಾರೆ.

RELATED ARTICLES

Latest News