Sunday, November 3, 2024
Homeರಾಜ್ಯಮಾನವೀಯತೆಯೇ ಸಂವಿಧಾನದ ಆಶಯ : ಸಿದ್ದರಾಮಯ್ಯ

ಮಾನವೀಯತೆಯೇ ಸಂವಿಧಾನದ ಆಶಯ : ಸಿದ್ದರಾಮಯ್ಯ

ಬೆಂಗಳೂರು, ನ.26- ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ಸಂವಿಧಾನದ ಪೀಠಿಕೆಯಲ್ಲಿ ಇದರ ಸಂವಿಧಾನದ ಸಾರವಿದೆ ಎಂದರು.

ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸಂವಿಧಾನದ ಪ್ರಸ್ತಾವನೆಯನ್ನು ಓದುವುದರಿಂದ ಮಕ್ಕಳಿಗೆ ಸಂವಿಧಾನದ ಅರಿವಾಗುತ್ತದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ತಿಳಿಸಿದರು. ಇಂದು ಸಂವಿಧಾನ ಅಂಗೀಕರಾವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ.ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದರು.

ಬಿಜೆಪಿಯಿಂದ ಸಂವಿಧಾನ ಹತ್ತಿಕ್ಕುವ ಕಾರ್ಯ ನಡೆಯುತ್ತಿದೆ : ಖರ್ಗೆ

ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ಇಂದು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು ಎಂದು ಹೇಳಿದರು.

ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದವರ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವವರ ಕೈಗಳಲ್ಲಿ ಸಂವಿಧಾನ ಇದ್ದಾಗ ಮಾತ್ರ, ಅದರ ಧ್ಯೇಯೋದ್ದೇಶಗಳನ್ನು ಸಾಸಿದಂತಾಗುತ್ತದೆ ಎಂದರು.

ರಾಷ್ಟ್ರಕವಿ ಕುವೆಂಪು ಹೇಳಿದಂತೆ, ಸರ್ವ ಜನಾಂಗದ ಶಾಂತಿಯ ತೋಟ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂ, ಜವಾಹರ್ ಲಾಲ್ ನೆಹರೂ ಕನಸು ಕಂಡಿದ್ದರು ಎಂದು ಹೇಳಿದರು.
ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಭಾಗವನ್ನು ಮುಖ್ಯಮಂತ್ರಿಗಳು ಬೋಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ , ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

RELATED ARTICLES

Latest News